ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿಕೊಂಡು, ಯೆಹೂದ ಬೆನ್ಯಾಮೀನ್ಯರೆಲ್ಲರಲ್ಲಿ ತಮ್ಮ ಪಿತೃಗಳ ಮನೆಗಳ ಪ್ರಕಾರ ಅವರನ್ನು ಸಾವಿರ ಜನರ ಮೇಲೆ ಅಧಿಪತಿಗಳಾಗಿಯೂ, ನೂರು ಜನರ ಮೇಲೆ ಅಧಿಪತಿಗಳಾಗಿಯೂ ಮಾಡಿದನು. ಅವನು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ಪ್ರಾಯವುಳ್ಳವರನ್ನು ಲೆಕ್ಕಿಸಿ ಆಯ್ದುಕೊಂಡನು. ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ, ಖೇಡ್ಯವನ್ನೂ ಹಿಡಿದುಕೊಂಡಿರುವಂಥ, ಮೂರು ಲಕ್ಷ ಮಂದಿಯನ್ನು ಕೂಡಿಸಿದನು.
ಇದಲ್ಲದೆ ಆಸನಿಗೆ ದೊಡ್ಡ ಗುರಾಣಿಗಳನ್ನೂ, ಈಟಿಗಳನ್ನೂ ಹಿಡಿಯುವ ಸೈನ್ಯವಿತ್ತು. ಯೆಹೂದದವರು ಮೂರು ಲಕ್ಷ ಮಂದಿಯೂ, ಬೆನ್ಯಾಮೀನವರಲ್ಲಿ ಚಿಕ್ಕ ಗುರಾಣಿಗಳನ್ನು ಹಿಡಿಯುವ, ಬಿಲ್ಲುಗಳನ್ನು ಎಸೆಯುವ ಎರಡು ಲಕ್ಷದ ಎಂಬತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿ ಯುದ್ಧವೀರರಾಗಿದ್ದರು.
ಆಗ ಅಬೀಯನು ಯುದ್ಧಭಟರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯ್ಕೆಯಾದ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷಮಂದಿ ಆಯ್ಕೆಯಾದ ಪರಾಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು, ಯೆಹೂದ ಮತ್ತು ಬೆನ್ಯಾಮೀನವರ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.
ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು.