Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:22 - ಕನ್ನಡ ಸಮಕಾಲಿಕ ಅನುವಾದ

22 ಉಜ್ಜೀಯನ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗ ಯೆಶಾಯನೆಂಬ ಪ್ರವಾದಿ ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪ್ರಾರಂಭದಿಂದ ಕೊನೆಯವರೆಗೆ ಉಜ್ಜೀಯನು ಮಾಡಿದ ಕಾರ್ಯಗಳನ್ನೆಲ್ಲಾ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ತನ್ನ ಪುಸ್ತಕದಲ್ಲಿ ಬರೆದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:22
8 ತಿಳಿವುಗಳ ಹೋಲಿಕೆ  

ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.


ರೆಹಬ್ಬಾಮನು ಅರಸನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ, ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋವನ ಪುಸ್ತಕದಲ್ಲಿಯೂ ಬರೆದಿರುತ್ತವೆ. ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು.


ಸೊಲೊಮೋನನ ಉಳಿದ ಕ್ರಿಯೆಗಳು, ಮೊದಲನೆಯವುಗಳೂ, ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ, ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ, ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಬರೆದಿರುತ್ತವೆ.


ಉಜ್ಜೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನು ಕುಷ್ಠರೋಗಿಯಾಗಿದ್ದರಿಂದ, ಅವರು ಅವನ ಶವವನ್ನು ರಾಜಕುಟುಂಬದ ಸ್ಮಶಾನ ಭೂಮಿಯ ಹತ್ತಿರದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.


ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.


ಅಮಚ್ಯನ ಆಳ್ವಿಕೆಯ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಯೆಹೂದ ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಹಿಜ್ಕೀಯನ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗ ಪ್ರವಾದಿಯಾದ ಯೆಶಾಯನ ದರ್ಶನದ ಪುಸ್ತಕದಲ್ಲಿ ಮತ್ತು ಯೆಹೂದ ಇಸ್ರಾಯೇಲ್ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು