Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:5 - ಕನ್ನಡ ಸಮಕಾಲಿಕ ಅನುವಾದ

5 ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನ ಕಾಲದಲ್ಲಿ ಅವನು ದೇವರನ್ನು ಅವಲಂಬಿಸಿದ್ದ ಕಾಲಾವಧಿಯಲ್ಲೇ ದೇವರಾದ ಸರ್ವೇಶ್ವರ ಅವನನ್ನು ಅಭಿವೃದ್ಧಿಗೆ ತಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:5
24 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ಯೋವಾಷನು ಯಾಜಕನಾದ ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.


ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.


ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.


ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,


ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.


ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.


ಆಗ ಫರೋಹನು ಯೋಸೇಫನಿಗೆ, “ನಾನು ಕನಸನ್ನು ಕಂಡಿದ್ದೇನೆ, ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ, ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ,” ಎಂದನು.


ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ.


“ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಕುರಿತು ಹೇಳಿದ ಪ್ರಕಾರ, ನೀನು ಕೃತಾರ್ಥನಾಗಿ, ನೀನು ನಿನ್ನ ದೇವರಾದ ಯೆಹೋವ ದೇವರ ಆಲಯವನ್ನು ಕಟ್ಟಿಸುವಂತೆ ಅವರು ನಿನ್ನ ಸಂಗಡ ಇರಲಿ.


ಆದರೆ ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.


ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.


ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು.


ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.


ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಹೀಗೆ ಯೋತಾಮನು ತನ್ನ ದೇವರಾದ ಯೆಹೋವ ದೇವರ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿಕೊಂಡದ್ದರಿಂದ ಅವನು ಬಲಗೊಂಡನು.


“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.


ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.


ಇದಲ್ಲದೆ ಅವನು ಯೆಹೂದದಲ್ಲಿ ಕೋಟೆಗಳುಳ್ಳ ಪಟ್ಟಣಗಳನ್ನು ಕಟ್ಟಿದನು. ಏಕೆಂದರೆ ದೇಶವು ಶಾಂತವಾಗಿತ್ತು. ಯೆಹೋವ ದೇವರು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರ್ಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.


ಹಿಜ್ಕೀಯನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.


ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು, ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು