Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:7 - ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಫಿಲಿಷ್ಟಿಯರ ಮೇಲೆಯೂ, ಗುರ್ಬಾಳಿನಲ್ಲಿ ವಾಸವಾಗಿದ್ದ ಅರಬಿಯರ ಮೇಲೆಯೂ, ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿದಾಗ, ದೇವರು ಅವನಿಗೆ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಫಿಲಿಷ್ಟಿಯರೊಡನೆ ಗೂರ್‍ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಫಿಲಿಷ್ಟಿಯರೊಡನೆಯೂ ಗೂರ್ ಬಾಳಿನಲ್ಲಿರುವ ಅರಬಿಯರೊಡನೆಯೂ ಮೆಗೂನ್ಯರೊಡನೆಯೂ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯವು ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:7
14 ತಿಳಿವುಗಳ ಹೋಲಿಕೆ  

ಇದಲ್ಲದೆ ಕೂಷ್ಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಯೆಹೋವ ದೇವರು ಎಬ್ಬಿಸಿದರು.


ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.


ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.


ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.


ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು, ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು.


ಇದರ ತರುವಾಯ ಮೋವಾಬ್ಯರೂ, ಅಮ್ಮೋನಿಯರೂ, ಮೆಗೂನ್ಯರೂ ಯೆಹೋಷಾಫಾಟನ ಮೇಲೆ ಯುದ್ಧಮಾಡಲು ಬಂದರು.


ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಗಳನ್ನೂ, ಕಪ್ಪದ ಹಣವನ್ನು ತಂದರು. ಅರಬಿಯ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.


ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.


ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.


ಹೆಸರು ಹೆಸರಾಗಿ ಬರೆದಿರುವವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಅಲ್ಲಿಗೆ ಹೋಗಿ ಹಾಮ್ಯರ ಡೇರೆಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವುದರಿಂದ ಇಂದಿನವರೆಗೂ ಅವರ ಸ್ಥಳದಲ್ಲಿ ವಾಸಿಸಿದರು.


ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.


ಆಸನು ಅವನಿಗೆದುರಾಗಿ ಹೊರಟುಹೋದನು. ಮಾರೇಷಾದ ಬಳಿಯಲ್ಲಿ ಚೆಫಾತಾದ ತಗ್ಗಿನಲ್ಲಿ ವ್ಯೂಹ ಕಟ್ಟಿದರು.


ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು