2 ಪೂರ್ವಕಾಲ ವೃತ್ತಾಂತ 27:5 - ಕನ್ನಡ ಸಮಕಾಲಿಕ ಅನುವಾದ5 ಯೋತಾಮನು ಅಮ್ಮೋನ್ಯರ ಅರಸನ ಸಂಗಡ ಯುದ್ಧಮಾಡಿ ಅವನನ್ನು ಜಯಿಸಿದನು. ಆದ್ದರಿಂದ ಅಮ್ಮೋನಿಯರು ಅದೇ ವರ್ಷದಲ್ಲಿ 3,400 ಕಿಲೋಗ್ರಾಂ ಬೆಳ್ಳಿ, 1,600 ಮೆಟ್ರಿಕ್ ಟನ್ ಗೋಧಿ, 1,350 ಮೆಟ್ರಿಕ್ ಟನ್ ಜವೆಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನಿಯರು ಎರಡನೆಯ ವರ್ಷದಲ್ಲಿಯೂ, ಮೂರನೆಯ ವರ್ಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಮ್ಮೋನಿಯರ ಅರಸರೊಡನೆ ಯುದ್ಧ ಮಾಡಿ ಅವರನ್ನು ಗೆದ್ದನು. ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತು ಸಾವಿರ ಕೋರ್ (ಸಾವಿರ ಮೆಟ್ರಿಕ್ ಟನ್) ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಮ್ಮೋನಿಯರ ಅರಸನೊಡನೆ ಯುದ್ಧಮಾಡಿ ಅವರ ಮೇಲೆ ಜಯಗಳಿಸಿದನು; ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ 3,400 ಕಿಲೋಗ್ರಾಂ ಬೆಳ್ಳಿ, 1000 ಮೆಟ್ರಿಕ್ ಟನ್ ಗೋದಿ, 100 ಮೆಟ್ರಿಕ್ ಟನ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮತ್ತು ಅಮ್ಮೋನಿಯರ ಅರಸನೊಡನೆ ಯುದ್ಧಮಾಡಿ ಅವರನ್ನು ಜಯಿಸಿದನು; ಅಮ್ಮೋನಿಯರು ಆ ವರುಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತುಸಾವಿರ ಕೋರ್ ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರುಷಗಳಲ್ಲಿಯೂ ಹೀಗೆಯೇ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೋತಾಮನು ಅಮ್ಮೋನಿಯರ ಸೈನ್ಯದೊಡನೆ ಕಾದಾಡಿ ಜಯಗಳಿಸಿದನು. ಅವರು ಪ್ರತಿ ವರ್ಷ ಮೂರು ವರ್ಷಗಳ ಕಾಲ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬೆಳ್ಳಿ, ಅರವತ್ತೆರಡು ಸಾವಿರ ಬುಷೆಲ್ ಗೋಧಿಯನ್ನೂ, ಅರವತ್ತೆರಡು ಸಾವಿರ ಬುಷೆಲ್ ಜವೆಗೋಧಿಯನ್ನೂ ಯೋತಾಮನಿಗೆ ಕಾಣಿಕೆಯಾಗಿ ಕೊಟ್ಟರು. ಅಧ್ಯಾಯವನ್ನು ನೋಡಿ |