Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 27:6 - ಕನ್ನಡ ಸಮಕಾಲಿಕ ಅನುವಾದ

6 ಹೀಗೆ ಯೋತಾಮನು ತನ್ನ ದೇವರಾದ ಯೆಹೋವ ದೇವರ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿಕೊಂಡದ್ದರಿಂದ ಅವನು ಬಲಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೋತಾಮನು ತನ್ನ ದೇವರಾದ ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಂಡಿದ್ದರಿಂದ ಶಕ್ತಿಶಾಲಿ ಆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೋತಾಮನು ದೇವರಿಗೆ ವಿಧೇಯನಾಗಿ ಜೀವಿಸಿದ್ದ ಕಾರಣ ಬಲಿಷ್ಠನಾದ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 27:6
5 ತಿಳಿವುಗಳ ಹೋಲಿಕೆ  

ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.


ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.


ಯೋತಾಮನು ಅಮ್ಮೋನ್ಯರ ಅರಸನ ಸಂಗಡ ಯುದ್ಧಮಾಡಿ ಅವನನ್ನು ಜಯಿಸಿದನು. ಆದ್ದರಿಂದ ಅಮ್ಮೋನಿಯರು ಅದೇ ವರ್ಷದಲ್ಲಿ 3,400 ಕಿಲೋಗ್ರಾಂ ಬೆಳ್ಳಿ, 1,600 ಮೆಟ್ರಿಕ್ ಟನ್ ಗೋಧಿ, 1,350 ಮೆಟ್ರಿಕ್ ಟನ್ ಜವೆಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನಿಯರು ಎರಡನೆಯ ವರ್ಷದಲ್ಲಿಯೂ, ಮೂರನೆಯ ವರ್ಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.


ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು.


ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು