Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:10 - ಕನ್ನಡ ಸಮಕಾಲಿಕ ಅನುವಾದ

10 ಈಗ ನಿಮಗೆ ದಾಸರೂ, ದಾಸಿಯರೂ ಆಗಿರುವ ಹಾಗೆ ಯೆಹೂದದ ಮತ್ತು ಯೆರೂಸಲೇಮಿನ ಮಕ್ಕಳನ್ನು ನಿಮ್ಮ ವಶಮಾಡಬೇಕೆಂದು ಇದ್ದೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧಗಳು ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದೂ ಸಾಲದೆಂದು ನೀವು ಯೆಹೂದ್ಯರನ್ನೂ ಜೆರುಸಲೇಮನ್ನೂ ಬಲಾತ್ಕರಿಸಿ ದಾಸದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ಅಪರಾಧಗಳನ್ನು ನೀವೂ ಮಾಡಿದ್ದೀರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದು ಸಾಲದೆ ನೀವು ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲು ಯೋಚಿಸುತ್ತಿದ್ದೀರಿ. ನೀವು ಕೂಡ ಯೆಹೋವನಿಗೆ ವಿರೋಧವಾಗಿ ಪಾಪಮಾಡಲಿಲ್ಲವೇ? ಹೀಗೆ ಮಾಡುವದರಿಂದ ನೀವು ಸಹ ದೇವರ ದೃಷ್ಟಿಯಲ್ಲಿ ಪಾಪಮಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:10
6 ತಿಳಿವುಗಳ ಹೋಲಿಕೆ  

ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’


ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು