Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಸೈನ್ಯದವರು ಸೆರೆಯವರನ್ನೂ, ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ, ಸಮಸ್ತ ಕೂಟದ ಮುಂದೆಯೂ ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಭಟರು ಇದನ್ನು ಕೇಳಿ ಸೆರೆಯವರನ್ನೂ, ಕೊಳ್ಳೆಯನ್ನು ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಚರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೋಧರು ಇದನ್ನು ಕೇಳಿ ಸೆರೆಯವರನ್ನೂ ಕೊಳ್ಳೆಯನ್ನೂ ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಭಟರು ಇದನ್ನು ಕೇಳಿ ಸೆರೆಯವರನ್ನೂ ಕೊಳ್ಳೆಯನ್ನೂ ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಆ ಸೈನಿಕರು ತಮ್ಮ ಬಳಿಯಲ್ಲಿದ್ದ ಸೆರೆಯವರನ್ನು, ಬೆಲೆಬಾಳುವ ವಸ್ತುಗಳನ್ನು ಆ ನಾಯಕರ ಮತ್ತು ಇಸ್ರೇಲರ ಕೈಯಲ್ಲಿ ಕೊಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:14
3 ತಿಳಿವುಗಳ ಹೋಲಿಕೆ  

ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.


ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.


ಅದಕ್ಕವರು, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ಏನೂ ಕೇಳುವುದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ,” ಎಂದರು. ಆಗ ನಾನು ಯಾಜಕರನ್ನು ಕರೆದು, ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತೆಗೆದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು