Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:23 - ಕನ್ನಡ ಸಮಕಾಲಿಕ ಅನುವಾದ

23 ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೇಗೆಂದರೆ, ‘ಸಿರಿಯಾ ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿವೆ; ಅಂತೆಯೇ ನಾನೂ ಅವುಗಳಿಗೆ ಬಲಿಸಮರ್ಪಿಸಿದರೆ ನನಗೂ ಜಯವಾಗುವುದು’, ಎಂದುಕೊಂಡನು; ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಬಲಿಕೊಟ್ಟನು. ಆದರೆ ಆ ದೇವತೆಗಳಿಂದ ಅವನಿಗೂ ಎಲ್ಲ ಇಸ್ರಯೇಲರಿಗೂ ಕೇಡು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹೇಗಂದರೆ - ಅರಾಮ್‍ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿದವಲ್ಲಾ; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವದು ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸುವವನಾದನು. ಆ ದೇವತೆಗಳ ದೆಸೆಯಿಂದ ಅವನಿಗೂ ಎಲ್ಲಾ ಇಸ್ರಾಯೇಲ್ಯರಿಗೂ ಕೇಡುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:23
11 ತಿಳಿವುಗಳ ಹೋಲಿಕೆ  

ಅಮಚ್ಯನು ಎದೋಮ್ಯರನ್ನು ಹೊಡೆದು ತಿರುಗಿ ಬಂದ ತರುವಾಯ, ಸೇಯೀರನ ಮಕ್ಕಳ ದೇವರುಗಳನ್ನು ತೆಗೆದುಕೊಂಡು ಬಂದು, ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು, ಅವುಗಳ ಮುಂದೆ ಅಡ್ಡಬಿದ್ದು, ಅವುಗಳಿಗೆ ಧೂಪವನ್ನು ಸುಟ್ಟನು.


ಬಿರುಗಾಳಿಯಂತೆ ಕೊಚ್ಚಿಕೊಳ್ಳುತ್ತಾ ಮುಂದೆ ಸಾಗುವರು. ಅಪರಾಧಿ ಜನರವರು. ಅವರ ಸ್ವಂತ ಬಲ, ಅವರ ದೇವರು.”


“ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದೀ.


ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.


ಆದರೆ ದ್ರೋಹಿಗಳೂ, ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಯೆಹೋವ ದೇವರನ್ನು ತೊರೆದವರು ನಿರ್ಮೂಲವಾಗುವರು.


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ.


ಅವಳು ತನ್ನ ಪ್ರೇಮಿಗಳನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವುದಿಲ್ಲ. ಹುಡುಕಿದರೂ ಅವರು ಸಿಕ್ಕುವುದಿಲ್ಲ. ಆಗ ಅವಳು ಹೀಗೆ ಎಂದುಕೊಳ್ಳುವಳು, ‘ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು. ಏಕೆಂದರೆ ಆಗ ನನ್ನ ಸ್ಥಿತಿ ಪ್ರಸ್ತುತ ಸ್ಥಿತಿಗಿಂತ ಉತ್ತಮವಾಗಿತ್ತು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು