2 ಪೂರ್ವಕಾಲ ವೃತ್ತಾಂತ 28:24 - ಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇದಲ್ಲದೆ, ಅಹಾಜನು ದೇವಾಲಯದ ಸಾಮಗ್ರಿಗಳನ್ನು ಕೂಡಿಸಿ, ಅವುಗಳನ್ನು ಚೂರುಚೂರು ಮಾಡಿಬಿಟ್ಟನು; ಸರ್ವೇಶ್ವರನ ಆಲಯದ ಬಾಗಿಲುಗಳನ್ನು ಮುಚ್ಚಿ ಜೆರುಸಲೇಮಿನ ಪ್ರತಿಯೊಂದು ಮೂಲೆಯಲ್ಲೂ ಯಜ್ಞವೇದಿಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ಆಹಾಜನು ದೇವಾಲಯದ ಸಾಮಾನುಗಳನ್ನು ಕೂಡಿಸಿ ಅವುಗಳನ್ನು ಕತ್ತರಿಸಿಬಿಟ್ಟನು; ಯೆಹೋವನ ಆಲಯದ ಬಾಗಲುಗಳನ್ನು ಮುಚ್ಚಿ ಯೆರೂಸಲೇವಿುನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇದಲ್ಲದೆ ದೇವಾಲಯದಿಂದ ಉಪಕರಣಗಳನ್ನೆಲ್ಲಾ ಆಹಾಜನು ಹೊರತೆಗೆದು ಅವುಗಳನ್ನು ಒಡೆದು ಚೂರುಚೂರು ಮಾಡಿದನು; ದೇವಾಲಯದ ಬಾಗಿಲನ್ನು ಮುಚ್ಚಿಸಿದನು. ಅವನು ವೇದಿಕೆಗಳನ್ನು ಮಾಡಿಸಿ ಜೆರುಸಲೇಮಿನ ರಸ್ತೆಗಳ ಮೂಲೆ ಮೂಲೆಗಳಲ್ಲಿ ಕಟ್ಟಿಸಿದನು. ಅಧ್ಯಾಯವನ್ನು ನೋಡಿ |