Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:27 - ಕನ್ನಡ ಸಮಕಾಲಿಕ ಅನುವಾದ

27 ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನು ಸತ್ತು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಯೇಲ್ ರಾಜಸ್ಮಶಾನದಲ್ಲಿ ಹೂಣದೆ ಜೆರುಸಲೇಮ್ ಪಟ್ಟಣದೊಳಗಿನ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್‍ರಾಜಶ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗನಾದ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಹಾಜನು ಸತ್ತಾಗ ಅವನನ್ನು ಪೂರ್ವಿಕರೊಂದಿಗೆ ಜೆರುಸಲೇಮಿನಲ್ಲಿ ಸಮಾಧಿಮಾಡಿದರು; ಅವನನ್ನು ಇಸ್ರೇಲ್ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಲಿಲ್ಲ. ಆಹಾಜನ ಬದಲಿಗೆ ಅವನ ಮಗನಾದ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:27
11 ತಿಳಿವುಗಳ ಹೋಲಿಕೆ  

ಯೆಹೋರಾಮ್ ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಗಳಲ್ಲಿ ಅಲ್ಲ.


ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.


ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.


ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ಅವನ ಅರಮನೆಯಲ್ಲಿ ಹೂಳಿಟ್ಟರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.


ಉಜ್ಜೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನು ಕುಷ್ಠರೋಗಿಯಾಗಿದ್ದರಿಂದ, ಅವರು ಅವನ ಶವವನ್ನು ರಾಜಕುಟುಂಬದ ಸ್ಮಶಾನ ಭೂಮಿಯ ಹತ್ತಿರದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೈವೋಕ್ತಿ ಬಂದಿತು:


ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.


ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದದ ಅರಸನಾಗಿದ್ದ ಆಹಾಜನ ಮಗ ಹಿಜ್ಕೀಯನು ಆಳಲು ಆರಂಭಿಸಿದನು.


ಇವನ ಸಹೋದರರಾಗಿರುವ ಯೆಹೋಷಾಫಾಟನ ಪುತ್ರರಾದ ಅಜರ್ಯನೂ, ಯೆಹೀಯೇಲನೂ, ಜೆಕರ್ಯನೂ, ಅಜರ್ಯನೂ, ಮೀಕಾಯೇಲನೂ, ಶೆಫಟ್ಯನೂ ಇದ್ದರು. ಇವರೆಲ್ಲರು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಪುತ್ರರು.


ಹಿಜ್ಕೀಯನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು