Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:4 - ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪೂಜಾಸ್ಥಳಗಳಲ್ಲೂ, ಗುಡ್ಡಗಳ ಮೇಲೆ ಹಾಗೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಗಳನ್ನೂ, ಧೂಪಗಳನ್ನೂ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪೂಜಾಸ್ಥಳಗಳಲ್ಲೂ, ದಿನ್ನೆಗಳ ಮೇಲೂ ಹಾಗು ಎಲ್ಲ ಹಸಿರು ಮರಗಳ ಕೆಳಗೂ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪೂಜಾಸ್ಥಳಗಳಲ್ಲಿಯೂ ದಿನ್ನೆಗಳ ಮೇಲೂ ಎಲ್ಲಾ ಹಸುರು ಮರಗಳ ಕೆಳಗೂ ಯಜ್ಞಗಳನ್ನೂ ಧೂಪಗಳನ್ನೂ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಹಾಜನು ಬೆಟ್ಟದ ಮೇಲೆ ಪ್ರತಿಯೊಂದು ಹಸಿರು ಮರದಡಿಯಲ್ಲಿದ್ದ ಉನ್ನತಸ್ಥಳಗಳಲ್ಲಿ ಧೂಪಹಾಕಿ ಯಜ್ಞಗಳನ್ನರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:4
10 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.


ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.


ಯಾಕೋಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ, ಭೋಜನ ಮಾಡುವುದಕ್ಕೆ ತನ್ನ ಬಂಧುಗಳನ್ನು ಕರೆಕಳುಹಿಸಿದನು. ಅವರು ಭೋಜನ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.


ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.


“ನೀನು ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ನೀನೆದ್ದು, ವೇಷಹಾಕಿಕೊಂಡು ಶೀಲೋವಿಗೆ ಹೋಗು. ‘ಈ ಜನರ ಮೇಲೆ ಅರಸನಾಗಿರುವೆ,’ ಎಂದು ನನಗೆ ಹೇಳಿದ ಪ್ರವಾದಿ ಅಹೀಯನು ಅಲ್ಲಿದ್ದಾನೆ.


ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು.


ಇಸ್ರಾಯೇಲಿನೊಳಗಿಂದ ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರಿಗೆ ಸಮರ್ಪಿತವಾಗಿತ್ತು.


ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.


ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? ಯೆಹೂದದ ಉನ್ನತ ಪೂಜಾಸ್ಥಳ ಯಾವುದು? ಅದು ಯೆರೂಸಲೇಮು ಅಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು