Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:5 - ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈ ಕಾರಣ ದೇವರಾದ ಸರ್ವೇಶ್ವರ ಅಹಾಜನನ್ನು ಸಿರಿಯಾದ ಅರಸನ ಕೈಗೆ ಒಪ್ಪಿಸಿದನು. ಸಿರಿಯಾದವರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ, ಅವನು ಇಸ್ರಯೇಲ್ ರಾಜನ ಕೈವಶವಾಗಿ ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದದರಿಂದ ಅವನ ದೇವರಾದ ಯೆಹೋವನು ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು; ಅರಾಮ್ಯರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು ಅವನಿಂದಲೂ ಪೂರ್ಣವಾಗಿ ಅಪಜಯಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5-6 ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:5
11 ತಿಳಿವುಗಳ ಹೋಲಿಕೆ  

ಯೋತಾಮನ ಮಗನೂ, ಉಜ್ಜೀಯನ ಮೊಮ್ಮಗನೂ, ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ, ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ, ಇಸ್ರಾಯೇಲರ ಅರಸನೂ ಆದ ಪೆಕಹ ಎಂಬುವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.


ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಅರಾಮ್ಯರು ಚಿಕ್ಕ ಗುಂಪಿನ ಸೈನ್ಯದ ಸಂಗಡ ಬಂದಿದ್ದರೂ, ಯೆಹೋವ ದೇವರು ಅವರ ಮಹಾ ಸೈನ್ಯವನ್ನು ಶತ್ರುಗಳ ಕೈಯಲ್ಲಿ ಒಪ್ಪಿಸಿದನು. ಹೀಗೆಯೇ ಯೆಹೋವ ದೇವರು ಯೋವಾಷನಿಗೆ ವಿರೋಧವಾಗಿ ತೀರ್ಪು ಮಾಡಿದರು.


“ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ, ಅದನ್ನು ವ್ಯಥೆಪಡಿಸಿ, ಅದರಲ್ಲಿ ನಮಗಾಗಿ ಮಾಡಿಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ, ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೆಯೇಲನ ಮಗನನ್ನು ನೇಮಿಸಿಕೊಳ್ಳೋಣ,” ಎಂದುಕೊಂಡಿದ್ದಾರೆ.


ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.


ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.


ಇದಕ್ಕೋಸ್ಕರ ನಮ್ಮ ಪಿತೃಗಳು ಖಡ್ಗದಿಂದ ಬಿದ್ದಿದ್ದಾರೆ. ನಮ್ಮ ಪುತ್ರ ಪುತ್ರಿಯರೂ, ನಮ್ಮ ಹೆಂಡತಿಯರೂ ಸೆರೆಯಲ್ಲಿದ್ದಾರೆ.


ಅರಾಮಿನ ಪುತ್ರಿಯರಿಂದಲೂ ಮತ್ತು ಅದರ ಸುತ್ತಲಿರುವಂತ ಎಲ್ಲವುಗಳಿಂದಲೂ ಮತ್ತು ನಿನ್ನನ್ನು ಉದಾಸೀನ ಮಾಡಿದಂಥ ಎಲ್ಲಾ ಫಿಲಿಷ್ಟಿಯರ ಪುತ್ರಿಯರಿಂದಲೂ, ನಿನಗೆ ನಿಂದೆಯು ಬಂದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವುದಕ್ಕೆ ಪೂರ್ವದಲ್ಲಿಯೇ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು