Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:7 - ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಎಫ್ರಾಯೀಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ಮಾಸೇಯನನ್ನೂ, ಅರಮನೆಯ ನಾಯಕನಾದ ಅಜ್ರೀಕಾಮನನ್ನೂ, ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬುವವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬವರನ್ನು ಎಫ್ರಯಿಮ್ ನಾಡಿನ ಜಿಕ್ರಿಯೆಂಬ ಶೂರನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಎಫ್ರಾಯೀಮಿನ ಜಿಕ್ರಿಯು ಧೈರ್ಯಶಾಲಿಯಾದ ಸಿಪಾಯಿ. ಅವನು ಅರಸನಾದ ಆಹಾಜನ ಮಗನಾದ ಮಾಸೇಯನನ್ನು, ಅರಮನೆಯ ಅಧಿಕಾರಿಯಾದ ಅಜ್ರೀಕಾಮನನ್ನು ಮತ್ತು ಅಧಿಕಾರದಲ್ಲಿ ಅರಸನಿಗೆ ಎರಡನೆಯವನಾಗಿದ್ದ ಎಲ್ಕಾನನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:7
6 ತಿಳಿವುಗಳ ಹೋಲಿಕೆ  

ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.


ಆಗ ಅವರು ಆ ಕಾಣಿಕೆಯನ್ನು ತೆಗೆದುಕೊಂಡು, ತಮ್ಮ ಕೈಯಲ್ಲಿ ಎರಡರಷ್ಟು ಹಣವನ್ನೂ, ಬೆನ್ಯಾಮೀನನನ್ನೂ ಕರೆದುಕೊಂಡು ಈಜಿಪ್ಟಿಗೆ ಹೋಗಿ, ಯೋಸೇಫನ ಮುಂದೆ ನಿಂತರು.


ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಬಂದಿರಬಹುದು.


ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.


ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.


ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು