Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:8 - ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ, ಇಸ್ರಾಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಹೆಂಗಸರನ್ನೂ, ಗಂಡು, ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಸೂರೆಮಾಡಿಕೊಂಡು ಸಮಾರ್ಯಕ್ಕೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ, ಇಸ್ರಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು, ಸಮಾರಿಯಕ್ಕೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಇಸ್ರಾಯೇಲ್ಯರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು ಸಮಾರ್ಯಕ್ಕೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲರ ಸೈನ್ಯದವರು ಯೆಹೂದದಲ್ಲಿ ವಾಸಿಸುವ ಅವರ ಸ್ವಂತ ಕುಟುಂಬದವರಲ್ಲಿ ಎರಡು ಲಕ್ಷ ಮಂದಿಯನ್ನು ಸೆರೆಹಿಡಿದರು. ಅವರ ಹೆಂಗಸರು, ಮಕ್ಕಳು ಮತ್ತು ಅಧಿಕವಾದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದರು. ಇಸ್ರೇಲರು ಇವರೆಲ್ಲರನ್ನೂ, ಅಮೂಲ್ಯ ವಸ್ತುಗಳನ್ನೂ ಸಮಾರ್ಯಕ್ಕೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:8
9 ತಿಳಿವುಗಳ ಹೋಲಿಕೆ  

‘ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ. ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯಾರೊಬ್ಬಾಮನ ಮೇಲೆ ಹೋಗದೆ ಹಿಂದಿರುಗಿ ಹೋದರು.


ನೀವು ಪುತ್ರಪುತ್ರಿಯರನ್ನು ಪಡೆಯುವಿರಿ, ಆದರೆ ಅವರ ಕೂಡ ಸಂತೋಷಿಸುವುದಿಲ್ಲ. ಏಕೆಂದರೆ ಅವರು ಸೆರೆಯಾಗಿ ಹೋಗುವರು.


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


“ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ.


ಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು.


ಅದಕ್ಕವನು, “ಸಂಹರಿಸಬೇಡ. ನೀನು ನಿನ್ನ ಖಡ್ಗದಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳದವರನ್ನು ಹೊಡೆಯುತ್ತೀಯೋ? ರೊಟ್ಟಿಯನ್ನೂ, ನೀರನ್ನೂ ಇವರ ಮುಂದೆ ಇಡು. ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ,” ಎಂದನು.


ಇದಲ್ಲದೆ ಎಫ್ರಾಯೀಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ಮಾಸೇಯನನ್ನೂ, ಅರಮನೆಯ ನಾಯಕನಾದ ಅಜ್ರೀಕಾಮನನ್ನೂ, ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.


ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.


ಹೀಗೆ ಮನಸ್ಸೆಯು ಎಫ್ರಾಯೀಮನ್ನು ಮತ್ತು ಎಫ್ರಾಯೀಮು ಮನಸ್ಸೆಯನ್ನು ಹಾನಿ ಮಾಡುತ್ತಿವೆ. ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು