Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:9 - ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅ ವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಮಾರಿಯದಲ್ಲಿ ಸರ್ವೇಶ್ವರನ ಒಬ್ಬ ಪ್ರವಾದಿ ಇದ್ದನು. ಅವನ ಹೆಸರು ಓದೇದ್. ಅವನು ಸಮಾರಿಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು, “ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರ ಆಕಾಶವನ್ನು ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ - ನಿಮ್ಮ ಪಿತೃಗಳ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:9
22 ತಿಳಿವುಗಳ ಹೋಲಿಕೆ  

ಏಕೆಂದರೆ ಆಕೆಯ ಪಾಪಗಳು ಒಂದಕ್ಕೊಂದು ಸೇರಿ ಆಕಾಶದಷ್ಟಾಗಿವೆ. ದೇವರು ಆಕೆಯ ಅಪರಾಧಗಳನ್ನು ಜ್ಞಾಪಿಸಿಕೊಂಡಿದ್ದಾರೆ.


ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.


ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು.


ನೀವು ಗಾಯಮಾಡಿದ ನನ್ನನ್ನು ಹಿಂಸಿಸುತ್ತಾರೆ. ನೀವು ನೋಯಿಸಿದ ನನ್ನನ್ನು ಕುರಿತು ಚುಚ್ಚಿಮಾತನಾಡಿಕೊಳ್ಳುತ್ತಾರೆ.


ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.


ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು.


ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಬಲಗೊಂಡು, ನೀನು ಏನು ಮಾಡಬೇಕೆಂಬುವುದನ್ನು ಆಲೋಚಿಸು. ಏಕೆಂದರೆ ವಸಂತ ಋತುವಿನಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು,” ಎಂದನು.


ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್‌ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್‌ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು.


ಅನಂತರ ಅವರು, “ಬನ್ನಿರಿ, ನಾವು ಭೂಮಿಯ ಮೇಲೆ ಪಟ್ಟಣವನ್ನು ಕಟ್ಟೋಣ. ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನು ನಮಗೋಸ್ಕರವಾಗಿ ಕಟ್ಟಿಕೊಂಡು, ನಮಗೆ ಹೆಸರು ಸಂಪಾದಿಸಿಕೊಳ್ಳೋಣ. ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರುವುದಕ್ಕೆ ಆಸ್ಪದವಾಗುವದಿಲ್ಲ,” ಎಂದುಕೊಂಡರು.


ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.


ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಯೆಹೋವ ದೇವರ ಕೈಯಲ್ಲಿಯೇ ಬೀಳುತ್ತೇನೆ. ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.


“ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು