Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:16 - ಕನ್ನಡ ಸಮಕಾಲಿಕ ಅನುವಾದ

16 ಯಾಜಕರು ಯೆಹೋವ ದೇವರ ಆಲಯವನ್ನು ಶುದ್ಧಿಮಾಡಲು ಅದರ ಒಳಭಾಗವನ್ನು ಪ್ರವೇಶಿಸಿ, ಯೆಹೋವ ದೇವರ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಯೆಹೋವ ದೇವರ ಆಲಯದ ಅಂಗಳದೊಳಗೆ ತಂದರು. ಆಗ ಲೇವಿಯರು ಅದನ್ನು ತೆಗೆದುಕೊಂಡು, ಕಿದ್ರೋನ್ ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯಾಜಕರು ಸರ್ವೇಶ್ವರನ ಆಲಯವನ್ನು‍ ಶುದ್ಧಮಾಡುವುದಕ್ಕೆ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ಹೊರಗೆ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವದಕ್ಕೋಸ್ಕರ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಜಕರು ದೇವಾಲಯದ ಒಳಭಾಗವನ್ನು ಪ್ರವೇಶಿಸಿ ಶುಚಿಮಾಡಿದರು. ದೇವಾಲಯದೊಳಗೆ ಇದ್ದ ಎಲ್ಲಾ ಹೊಲಸು ವಸ್ತುಗಳನ್ನು ಹೊರತೆಗೆದರು. ದೇವಾಲಯದ ಅಂಗಳಕ್ಕೆ ತಂದು ಅಲ್ಲಿಂದ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:16
15 ತಿಳಿವುಗಳ ಹೋಲಿಕೆ  

ಅರಸನಾದ ಆಸನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಇದಲ್ಲದೆ ಆಸನು ಆ ಮೂರ್ತಿಯನ್ನು ಕಡಿದು ಚೂರುಚೂರು ಮಾಡಿ, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.


ಯೇಸು ಪ್ರಾರ್ಥನೆಯನ್ನು ಮುಗಿಸಿದ ಮೇಲೆ ತಮ್ಮ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದರು. ಮತ್ತೊಂದು ಕಡೆ ಇರುವ ತೋಟದೊಳಗೆ ಯೇಸು ಮತ್ತು ಅವರ ಶಿಷ್ಯರು ಪ್ರವೇಶಿಸಿದರು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಸುಣ್ಣ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ. ಆದರೆ ಒಳಗೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರುತ್ತವೆ.


ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು. ಬೆಳೆ ಬೆಳೆಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವುದಿಲ್ಲ.


ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು.


ಅವನು ಮಹಾಪರಿಶುದ್ಧವಾದ ಸ್ಥಳವನ್ನು ಕಟ್ಟಿದನು. ಅದರ ಉದ್ದವು ಆಲಯದ ಅಗಲದ ಪ್ರಕಾರ 9 ಮೀಟರ್; ಅದರ ಅಗಲ 9 ಮೀಟರ್. ಅವನು ಅದನ್ನು 20,000 ಕಿಲೋಗ್ರಾಂ ಶುದ್ಧ ಬಂಗಾರದಿಂದ ಹೊದಿಸಿದನು.


ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು.


ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.


ಆಗ ನಾನು ಹೇಳಿದ್ದರಿಂದ ಅವರು ಕೊಠಡಿಗಳನ್ನು ಶುದ್ಧ ಮಾಡಿದರು. ತರುವಾಯ ದೇವರ ಆಲಯದ ಪಾತ್ರೆಗಳನ್ನೂ ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತಿರುಗಿ ಅಲ್ಲಿ ತಂದು ಇಡಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು