2 ಪೂರ್ವಕಾಲ ವೃತ್ತಾಂತ 29:17 - ಕನ್ನಡ ಸಮಕಾಲಿಕ ಅನುವಾದ17 ಅವರು ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಪ್ರತಿಷ್ಠೆ ಮಾಡಲು ಆರಂಭಿಸಿ, ಆ ತಿಂಗಳ ಎಂಟನೆಯ ದಿವಸದಲ್ಲಿ ಯೆಹೋವ ದೇವರ ದ್ವಾರಾಂಗಳದವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದನ್ನು ಮೊದಲನೆಯ ತಿಂಗಳಿನ ಹದಿನಾರನೆಯ ದಿವಸದಲ್ಲಿ ಮುಗಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಈ ಶುದ್ಧೀಕರಣವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಸರ್ವೇಶ್ವರನ ಆಲಯದ ಮಂಟಪಕ್ಕೆ ಕೈಹಾಕಿದರು; ಹೀಗೆ ಸರ್ವೇಶ್ವರನ ಆಲಯವನ್ನು ಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ಮೊದಲನೆಯ ತಿಂಗಳಿನ ಮೊದನೆಯ ದಿನದಲ್ಲಿ ಶುದ್ಧೀಕರಣವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಯೆಹೋವನ ಆಲಯವನ್ನು ಶುದ್ಧಪಡಿಸುವದರಲ್ಲಿ ಎಂಟು ದಿನಗಳು ಕಳೆದುಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ತೀರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಲೇವಿಯರು ಪವಿತ್ರ ಸೇವೆಯನ್ನು ಮಾಡಲು ಸಿದ್ಧರಾದರು. ತಿಂಗಳಿನ ಎಂಟನೆಯ ದಿನದಲ್ಲಿ ದೇವಾಲಯದ ಮಂಟಪಕ್ಕೆ ಲೇವಿಯರು ಬಂದರು. ಎಂಟು ದಿನಗಳಲ್ಲಿ ಅವರು ದೇವಾಲಯವನ್ನೆಲ್ಲಾ ಶುಚಿಮಾಡಿದರು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಅವರು ಶುಚಿಮಾಡುವ ಕಾರ್ಯವನ್ನು ಮುಗಿಸಿದರು. ಅಧ್ಯಾಯವನ್ನು ನೋಡಿ |