18 ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರ ಆಲಯವನ್ನೆಲ್ಲಾ, ದಹನಬಲಿಪೀಠವನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು, ಅದರ ಎಲ್ಲಾ ಪಾತ್ರೆಗಳನ್ನೂ ಶುದ್ಧಿಮಾಡಿದೆವು.
18 ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.
18 ಆಮೇಲೆ ಅವರು ಅರಮನೆಗೆ ಹೋಗಿ, ಅರಸ ಹಿಜ್ಕೀಯನಿಗೆ, “ನಾವು ಸರ್ವೇಶ್ವರನ ಆಲಯವನ್ನು ಪೂರ್ತಿಯಾಗಿ ಶುದ್ಧೀಕರಿಸಿದೆವು. ಬಲಿಪೀಠವನ್ನು, ಅದರ ಉಪಕರಣಗಳನ್ನು, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು ಹಾಗು ಅದರ ಸಾಮಗ್ರಿಗಳನ್ನೂ ಶುದ್ಧಮಾಡಿದೆವು.
18 ಆಮೇಲೆ ಅವರು ಅರಮನೆಯೊಳಕ್ಕೆ ಹೋಗಿ ಅರಸನಾದ ಹಿಜ್ಕೀಯನಿಗೆ - ನಾವು ಯೆಹೋವನ ಸಮಸ್ತಾಲಯವನ್ನೂ ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಅದರ ಸಾಮಾನುಗಳನ್ನೂ ಶುದ್ಧಮಾಡಿದೆವು.
18 ಅನಂತರ ಅವರು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ಅರಸನಾದ ಹಿಜ್ಕೀಯನೇ, ನಾವು ದೇವಾಲಯವನ್ನೂ ಯಜ್ಞವೇದಿಕೆಯನ್ನೂ ದೇವಾಲಯದ ಸಾಮಾಗ್ರಿಗಳನ್ನೂ ಶುದ್ಧ ಮಾಡಿದೆವು. ರೊಟ್ಟಿಯನ್ನಿಡುವ ಮೇಜನ್ನೂ ಶುದ್ಧ ಮಾಡಿದೆವು.
ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.
ಅವರು ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಪ್ರತಿಷ್ಠೆ ಮಾಡಲು ಆರಂಭಿಸಿ, ಆ ತಿಂಗಳ ಎಂಟನೆಯ ದಿವಸದಲ್ಲಿ ಯೆಹೋವ ದೇವರ ದ್ವಾರಾಂಗಳದವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದನ್ನು ಮೊದಲನೆಯ ತಿಂಗಳಿನ ಹದಿನಾರನೆಯ ದಿವಸದಲ್ಲಿ ಮುಗಿಸಿದರು.