Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:20 - ಕನ್ನಡ ಸಮಕಾಲಿಕ ಅನುವಾದ

20 ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು, ಪಟ್ಟಣದ ಪ್ರಧಾನರನ್ನು ಕೂಡಿಸಿ, ಯೆಹೋವ ದೇವರ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅರಸ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಸರ್ವೇಶ್ವರನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅರಸನಾದ ಹಿಜ್ಕೀಯನು [ಮರುದಿನ] ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹಿಜ್ಕೀಯ ಅರಸನು ಪಟ್ಟಣದ ಅಧಿಕಾರಿಗಳನ್ನು ಮುಂಜಾನೆ ಕರೆಯಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:20
8 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ.


ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡರು.


ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.


ಅಬ್ರಹಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಗೆ ತಡಿ ಕಟ್ಟಿ, ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗ ಇಸಾಕನನ್ನೂ, ದಹನಬಲಿಗಳಿಗಾಗಿ ಕಟ್ಟಿಗೆಗಳನ್ನೂ ತೆಗೆದುಕೊಂಡು, ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.


ಇದಲ್ಲದೆ ಅರಸನಾದ ಆಹಾಜನು ಆಳಿದಾಗ, ದೇವದ್ರೋಹಿಯಾಗಿ ಬಿಸಾಡಿದ ಎಲ್ಲಾ ಸಲಕರಣೆಗಳನ್ನು ಪುನಃ ತಂದು ಪ್ರತಿಷ್ಠೆ ಮಾಡಿದೆವು. ಅವು ಯೆಹೋವ ದೇವರ ಬಲಿಪೀಠದ ಮುಂದೆ ಇವೆ,” ಎಂದು ಹೇಳಿದರು.


ಅವರು ರಾಜ್ಯಕ್ಕೋಸ್ಕರವೂ, ಪರಿಶುದ್ಧ ಸ್ಥಾನಕ್ಕೋಸ್ಕರವೂ, ಯೆಹೂದಕ್ಕೋಸ್ಕರವೂ ದೋಷಪರಿಹಾರದ ಬಲಿಯಾಗಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ, ಏಳು ಕುರಿಮರಿಗಳನ್ನೂ, ಏಳು ಮೇಕೆಗಳನ್ನೂ ತಂದರು. ಆಗ ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವ ದೇವರ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಹೇಳಿದನು.


ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.


ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಪ್ರಧಾನರಾದವರೊಂದಿಗೂ, ಸಮಸ್ತ ಇಸ್ರಾಯೇಲರ ಪಿತೃಗಳ ಶ್ರೇಷ್ಠರಾದ ಸಮಸ್ತ ಪ್ರಭುಗಳೊಂದಿಗೂ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು