2 ಪೂರ್ವಕಾಲ ವೃತ್ತಾಂತ 29:21 - ಕನ್ನಡ ಸಮಕಾಲಿಕ ಅನುವಾದ21 ಅವರು ರಾಜ್ಯಕ್ಕೋಸ್ಕರವೂ, ಪರಿಶುದ್ಧ ಸ್ಥಾನಕ್ಕೋಸ್ಕರವೂ, ಯೆಹೂದಕ್ಕೋಸ್ಕರವೂ ದೋಷಪರಿಹಾರದ ಬಲಿಯಾಗಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ, ಏಳು ಕುರಿಮರಿಗಳನ್ನೂ, ಏಳು ಮೇಕೆಗಳನ್ನೂ ತಂದರು. ಆಗ ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವ ದೇವರ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ಸರಕಾರ ದೇವಾಲಯ ಯೆಹೂದಪ್ರಜೆ ಇವುಗಳಿಗೋಸ್ಕರ ದೋಷಪರಿಹಾರಕಯಜ್ಞಮಾಡುವದಕ್ಕಾಗಿ ಹೋರಿ ಟಗರು ಕುರಿಮರಿ ಹೋತ ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಮಾಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಈ ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜೆಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಕೀಯನು ಆರೋನನ ಸಂತತಿಯವರಾದ ಯಾಜಕರಿಗೆ ಆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಮಾಡಲು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.