2 ಪೂರ್ವಕಾಲ ವೃತ್ತಾಂತ 29:24 - ಕನ್ನಡ ಸಮಕಾಲಿಕ ಅನುವಾದ24 ಆಗ ಸಮಸ್ತ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ, ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ, ದೋಷಪರಿಹಾರದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಯೇಲರ ದೋಷಪರಿಹಾರಕ್ಕಾಗಿ ಬಲಿಪೀಠದ ಮೇಲೆ ಸುರಿದರು. ಆ ದಹನಬಲಿಗಳೂ ದೋಷಪರಿಹಾರಕ ಬಲಿಗಳೂ ಎಲ್ಲ ಇಸ್ರಯೇಲರ ಪರವಾಗಿ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲ್ಯರ ದೋಷಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.