Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:27 - ಕನ್ನಡ ಸಮಕಾಲಿಕ ಅನುವಾದ

27 ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ, ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗಳಿಂದಲೂ ಯೆಹೋವ ದೇವರ ಹಾಡು ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗೆ ದಹನಬಲಿ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಯೇಲ್ ಅರಸ ದಾವೀದನ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದೂ ತುತೂರಿ ಊದುವುದೂ ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸರ್ವಾಂಗಹೋಮಸಮರ್ಪಣೆಯು ಪ್ರಾರಂಭಿಸಿದೊಡನೆ ಇಸ್ರಾಯೇಲ್‍ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವದೂ ತುತೂರಿಯೂದುವದೂ ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಬಳಿಕ ಹಿಜ್ಕೀಯನು ಸರ್ವಾಂಗಹೋಮವನ್ನು ಅರ್ಪಿಸಲು ಆಜ್ಞಾಪಿಸಿದನು. ಸರ್ವಾಂಗಹೋಮ ಆರಂಭವಾದ ಕೂಡಲೇ ದೇವರಿಗೆ ಸ್ತೋತ್ರಗಾನ ಹಾಡುವದೂ ಪ್ರಾರಂಭವಾಯಿತು. ತುತ್ತೂರಿಯನ್ನು ಊದಿ ದಾವೀದನ ವಾದ್ಯಗಳನ್ನು ಬಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:27
9 ತಿಳಿವುಗಳ ಹೋಲಿಕೆ  

ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು.


ಯೆಹೋವ ದೇವರಿಗೆ ಉಪಕಾರ ಸಲ್ಲಿಸಿರಿ; ಅವರು ಒಳ್ಳೆಯವರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.


ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”


ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.


ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ತನಕ ಹಾಡುಗಾರರು ಹಾಡಿದರು. ತುತೂರಿ ಊದುವವರು ಊದಿದರು.


ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.


ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು