2 ಪೂರ್ವಕಾಲ ವೃತ್ತಾಂತ 29:35 - ಕನ್ನಡ ಸಮಕಾಲಿಕ ಅನುವಾದ35 ಇದಲ್ಲದೆ ದಹನಬಲಿಗಳೂ, ಸಮಾಧಾನದ ಬಲಿಗಳ ಕೊಬ್ಬೂ, ದಹನಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳವಾಗಿದ್ದವು. ಹೀಗೆ ಯೆಹೋವ ದೇವರ ಆಲಯದ ಸೇವೆಯು ಸಿದ್ಧವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಇದಲ್ಲದೆ, ಯಾಜಕರು ಸಮರ್ಪಿಸಬೇಕಾಗಿದ್ದ ದಹನಬಲಿ, ಶಾಂತಿಸಮಾಧಾನ ಬಲಿಗಳ ಕೊಬ್ಬು ಹಾಗು ದಹನಬಲಿ ಸಂಬಂಧವಾದ ಪಾನದ್ರವ್ಯ ಇವೂ ಅಪಾರವಾಗಿ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ತಮ್ಮನ್ನು ಶುದ್ಧಪಡಿಸಿಕೊಳ್ಳುವದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು. ಇದಲ್ಲದೆ ಯಾಜಕರು ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನಯಜ್ಞಗಳ ಕೊಬ್ಬು, ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆ ದಿವಸ ಎಷ್ಟೋ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಪಾನದ್ರವ್ಯದ ಹೋಮಗಳನ್ನೂ ಸಮರ್ಪಿಸಿದರು. ಹೀಗೆ ದೇವಾಲಯದಲ್ಲಿ ಆರಾಧನೆಯು ಮತ್ತೆ ಪ್ರಾರಂಭವಾಯಿತು. ಅಧ್ಯಾಯವನ್ನು ನೋಡಿ |