2 ಪೂರ್ವಕಾಲ ವೃತ್ತಾಂತ 29:8 - ಕನ್ನಡ ಸಮಕಾಲಿಕ ಅನುವಾದ8 ಆದ್ದರಿಂದ ಯೆಹೂದ ಮತ್ತು ಯೆರೂಸಲೇಮಿನವರ ಮೇಲೆ ಯೆಹೋವ ದೇವರು ಕೋಪಗೊಂಡು, ಅವುಗಳನ್ನು ಭಯಭೀತಿಗೂ, ಅಪಹಾಸ್ಯಗಳಿಗೂ ಆಸ್ಪದ ಮಾಡಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದುದರಿಂದ ಸರ್ವೇಶ್ವರ, ಜುದೇಯ ನಾಡಿನ ಮೇಲೂ ಜೆರುಸಲೇಮಿನ ಮೇಲೂ ಕೋಪಗೊಂಡು ಅವುಗಳನ್ನು ಭಯಭೀತಿಗೂ ಹಾಸ್ಯಪರಿಹಾಸ್ಯಗಳಿಗೂ ಆಸ್ಪದವಾಗಿಸಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದದರಿಂದ ಯೆಹೋವನು ಯೆಹೂದದೇಶದ ಮೇಲೆಯೂ ಯೆರೂಸಲೇವಿುನ ಮೇಲೆಯೂ ಕೋಪವುಳ್ಳವನಾಗಿ ಅವುಗಳನ್ನು ಭಯವಿಸ್ಮಯ ಪರಿಹಾಸಗಳಿಗೆ ಆಸ್ಪದಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ಯೆಹೋವನು ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಬಹು ಕೋಪಗೊಂಡು ಅವರನ್ನು ಶಿಕ್ಷಿಸಿದನು. ಯೆಹೋವನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮಾಡಿದ್ದ ಸಂಗತಿಗಳನ್ನು ನೋಡಿದ ಅನ್ಯರು ಗೇಲಿ ಮಾಡುತ್ತ ವೈರತ್ವದಿಂದ ತಲೆಯಾಡಿಸಿದರು. ಇವೆಲ್ಲಾ ಸತ್ಯವೆಂದು ನಿಮಗೆ ತಿಳಿದದೆ. ಇದನ್ನು ನಿಮ್ಮ ಸ್ವಂತ ಕಣ್ಣುಗಳಿಂದ ನೋಡಿದ್ದೀರಿ. ಅಧ್ಯಾಯವನ್ನು ನೋಡಿ |