2 ಪೂರ್ವಕಾಲ ವೃತ್ತಾಂತ 3:1 - ಕನ್ನಡ ಸಮಕಾಲಿಕ ಅನುವಾದ1 ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆ ದಾವೀದನಿಗೆ ಯೆಹೋವ ದೇವರು ಕಾಣಿಸಿಕೊಂಡ ಸ್ಥಳವಾದ ಮೊರೀಯಾ ಬೆಟ್ಟದ ಮೇಲೆ, ದಾವೀದನು ಸಿದ್ಧಮಾಡಿದ ಸ್ಥಳವಾದ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸೊಲೊಮೋನನು ಜೆರುಸಲೇಮ್ ಪಟ್ಟಣದಲ್ಲಿ ತನ್ನ ತಂದೆ ದಾವೀದನಿಗೆ ದೇವದರ್ಶನ ಉಂಟಾದ ಮೋರೀಯಾ ಗುಡ್ಡದಲ್ಲಿ, ಸರ್ವೇಶ್ವರನ ಆಲಯವನ್ನು ಕಟ್ಟಿಸ ತೊಡಗಿದನು. ಈ ಮೊದಲು, ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು, ದಾವೀದನು ಇದಕ್ಕಾಗಿ ಸಿದ್ಧಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸೊಲೊಮೋನನು ಯೆರೂಸಲೇಮ್ ಪಟ್ಟಣದೊಳಗೆ ತನ್ನ ತಂದೆಯಾದ ದಾವೀದನಿಗೆ ದೇವದರ್ಶನವುಂಟಾದ ಮೋರೀಯಾ ಗುಡ್ಡದಲ್ಲಿ ಯೆಹೋವನ ಆಲಯವನ್ನು ಕಟ್ಟಿಸ ತೊಡಗಿದನು. ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಜೆರುಸಲೇಮಿನಲ್ಲಿರುವ ಮೋರೀಯಾ ಬೆಟ್ಟದ ಮೇಲೆ ಸೊಲೊಮೋನನು ದೇವಾಲಯವನ್ನು ಕಟ್ಟಲು ಪ್ರಾರಂಭಿಸಿದನು. ಅದೇ ಸ್ಥಳದಲ್ಲಿ ಸೊಲೊಮೋನನ ತಂದೆಯಾದ ದಾವೀದನಿಗೆ ಯೆಹೋವನು ದರ್ಶನ ಕೊಟ್ಟಿದ್ದನು. ಅದು ಯೆಬೂಸಿಯನಾದ ಒರ್ನಾನನ ಕಣವಾಗಿತ್ತು. ಆಲಯವನ್ನು ಕಟ್ಟಲು ದಾವೀದನು ಆ ಸ್ಥಳವನ್ನು ತಯಾರು ಮಾಡಿದ್ದನು. ಅಧ್ಯಾಯವನ್ನು ನೋಡಿ |