Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:1 - ಕನ್ನಡ ಸಮಕಾಲಿಕ ಅನುವಾದ

1 ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಹಿಜ್ಕೀಯನು, ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಮಹಾಲಯಕ್ಕೆ ಬರಬೇಕೆಂದು ಎಲ್ಲ ಇಸ್ರಯೇಲರಿಗೆ, ಯೆಹೂದ್ಯರಿಗೆ, ಎಫ್ರಯಿಮರಿಗೆ ಹಾಗು ಮನಸ್ಸೆಯವರಿಗೆ ದೂತರ ಮುಖಾಂತರ ಮತ್ತು ಪತ್ರಗಳ ಮೂಲಕ ತಿಳಿಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಹಿಜ್ಕೀಯನು - ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು ಎಲ್ಲಾ ಇಸ್ರಾಯೇಲ್ಯರಿಗೂ ಯೆಹೂದ್ಯರಿಗೂ ಎಫ್ರಾಯೀಮ್ಯರಿಗೂ ಮನಸ್ಸೆಯರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅರಸನಾದ ಹಿಜ್ಕೀಯನು ಯೆಹೂದದವರಿಗೂ ಇಸ್ರೇಲರಿಗೂ ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳವರಿಗೂ ಸಂದೇಶ ಕಳುಹಿಸಿ, ಯೆಹೋವನ ಆಲಯಕ್ಕೆ ಬಂದು ಇಸ್ರೇಲಿನ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸುವಂತೆ ಅವರನ್ನೆಲ್ಲಾ ಆಮಂತ್ರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:1
17 ತಿಳಿವುಗಳ ಹೋಲಿಕೆ  

“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


“ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳದಂತೆ, ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರದ ಆತ್ಮವು ಅವರ ಹೃದಯದಲ್ಲಿದೆ. ಅವರು ಯೆಹೋವ ದೇವರನ್ನು ಸ್ವೀಕರಿಸಿಕೊಳ್ಳುವುದಿಲ್ಲ.


ಪಸ್ಕದ ಕುರಿಮರಿಯನ್ನು ವಧಿಸಿ ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ,” ಎಂದನು.


ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದಿರಲಿ. ಏಕೆಂದರೆ ಯೆಹೋವ ದೇವರು ಇಸ್ರಾಯೇಲರಾದ ಎಫ್ರಾಯೀಮನ ಸಮಸ್ತ ಜನರ ಸಂಗಡ ಇರುವುದಿಲ್ಲ.


ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.


ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜಕರೂ, ಲೇವಿಯರೂ ತಮ್ಮ ಸಮಸ್ತ ಪ್ರಾಂತಗಳಿಂದ ಅವನ ಬಳಿಗೆ ಪುನಃ ಬಂದರು.


ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು.


ಆಗ ದೇವರು ತಮ್ಮ ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ, ಜನರೆಲ್ಲರೂ ಸಂತೋಷಪಟ್ಟರು. ಏಕೆಂದರೆ ಈ ಕಾರ್ಯವು ತ್ವರೆಯಾಗಿ ನಡೆಯಿತು.


ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು.


ಪ್ರವಾದಿಯಾದ ಯೆರೆಮೀಯನು ಸೆರೆಯಲ್ಲಿರುವ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಒಯ್ದ ಜನರೆಲ್ಲರಿಗೂ


ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲುಗೊಂಡು, ಇಸ್ರಾಯೇಲಿನ ಯೆಹೂದದ ಅರಸರ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ.


ಆಗ ಸಮಸ್ತ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ, ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ, ದೋಷಪರಿಹಾರದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು