Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:12 - ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:12
19 ತಿಳಿವುಗಳ ಹೋಲಿಕೆ  

ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.


ಆಗ ದೇವರು ತಮ್ಮ ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ, ಜನರೆಲ್ಲರೂ ಸಂತೋಷಪಟ್ಟರು. ಏಕೆಂದರೆ ಈ ಕಾರ್ಯವು ತ್ವರೆಯಾಗಿ ನಡೆಯಿತು.


ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.


ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ.


ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.


ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.


ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು.


ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ಇವರು ಅರಸನ ಆಜ್ಞಾಧಾರಕರಾಗಿ ಯೆಹೋವ ದೇವರ ವಾಕ್ಯವನ್ನು ಅನುಸರಿಸಿ, ತಮ್ಮ ಸಹೋದರರನ್ನು ಕೂಡಿಸಿ, ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯವನ್ನು ಶುಚಿಮಾಡಲು ಬಂದರು.


ಅವರು ಯಾವ ಕಾರ್ಯದಲ್ಲಾದರೂ, ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ಮೀರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು