Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:13 - ಕನ್ನಡ ಸಮಕಾಲಿಕ ಅನುವಾದ

13 ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿ ಕೂಡಿದರು; ಅದೊಂದು ಮಹಾಕೂಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗೆ ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನಾಚರಿಸುವದಕ್ಕಾಗಿ ಯೆರೂಸಲೇವಿುನಲ್ಲಿ ಕೂಡಿದರು; ಆ ಕೂಟವು ಮಹಾಸಮೂಹವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜೆರುಸಲೇಮಿನಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲು ಎಷ್ಟೋ ಮಂದಿ ಜೆರುಸಲೇಮಿಗೆ ಎರಡನೆಯ ತಿಂಗಳಲ್ಲಿ ಬಂದರು. ಅದು ಮಹಾ ಜನಸಮೂಹವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:13
7 ತಿಳಿವುಗಳ ಹೋಲಿಕೆ  

ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.


ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು.


ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.


ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು.


ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲುಗೊಂಡು, ಇಸ್ರಾಯೇಲಿನ ಯೆಹೂದದ ಅರಸರ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ.


ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು.


ಯೋಷೀಯನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಿದನು. ಮೊದಲನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು