Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:24 - ಕನ್ನಡ ಸಮಕಾಲಿಕ ಅನುವಾದ

24 ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ಕಾರಣ, ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ತೀರ್ಮಾನಿಸಿಕೊಂಡರು. ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ಗೊತ್ತುಮಾಡಿಕೊಂಡು ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೂದದ ಅರಸನಾದ ಹಿಜ್ಕೀಯನು ಸೇರಿಬಂದ ಜನರಿಗೆ ಒಂದು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ವಧಿಸಿ ತಿನ್ನಲು ಕೊಟ್ಟನು. ಪ್ರಧಾನರು ಒಂದು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಸೇರಿಬಂದ ಜನರಿಗೆ ಕೊಟ್ಟರು. ಎಷ್ಟೋ ಮಂದಿ ಯಾಜಕರು ಪವಿತ್ರ ಸೇವೆಗೆ ತಮ್ಮನ್ನು ಶುದ್ಧಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:24
8 ತಿಳಿವುಗಳ ಹೋಲಿಕೆ  

ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.


ಆದ್ದರಿಂದ ಪವಿತ್ರ ವೇದದಲ್ಲಿ ಹೀಗೆ ಹೇಳಲಾಗಿದೆ: “ಅವರು ಉನ್ನತಸ್ಥಾನಕ್ಕೆ ಏರಿಹೋದಾಗ, ಸೆರೆಯಾಳಾಗಿದ್ದ ಅನೇಕರನ್ನು ಕೊಂಡೊಯ್ದು ತಮ್ಮ ಜನರಿಗೆ ವರದಾನಗಳನ್ನು ಕೊಟ್ಟರು!”


ಹಬ್ಬಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವಿಶ್ರಾಂತಿಯ ದಿನಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವುದು ಪ್ರಭುವಿನ ಕೆಲಸವಾಗಿರುವುದು. ಆತನು ಇಸ್ರಾಯೇಲ್ಯರಿಗೆ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಳನ್ನು, ಧಾನ್ಯದ ಅರ್ಪಣೆಗಳನ್ನು, ದಹನಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಒದಗಿಸುವನು.


ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು.


ನೆರೆದುಬಂದ ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು