2 ಪೂರ್ವಕಾಲ ವೃತ್ತಾಂತ 30:25 - ಕನ್ನಡ ಸಮಕಾಲಿಕ ಅನುವಾದ25 ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಯೆಹೂದ್ಯರ ಸರ್ವಸಮೂಹದವರು, ಯಾಜಕರು, ಲೇವಿಯರು ಇಸ್ರಯೇಲ್ ಪ್ರಾಂತಗಳಿಂದ ನೆರೆದುಬಂದವರು ಎಲ್ಲರು ಹಾಗು ಇಸ್ರಯೇಲ್, ಜುದೇಯ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೆಹೂದ್ಯರ ಸರ್ವಸಮೂಹದವರೂ ಯಾಜಕರೂ ಲೇವಿಯರೂ ಇಸ್ರಾಯೇಲ್‍ಪ್ರಾಂತಗಳಿಂದ ನೆರೆದುಬಂದವರೆಲ್ಲರೂ ಇಸ್ರಾಯೇಲ್ ಯೆಹೂದ ಪ್ರಾಂತಗಳಲ್ಲಿದ್ದ ಪ್ರವಾಸಿಗಳೂ ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೂದದ ಜನರೆಲ್ಲರೂ ಲೇವಿಯರೂ ಇಸ್ರೇಲಿನಿಂದ ಬಂದ ಜನರೂ ಮತ್ತು ಇಸ್ರೇಲಿನಿಂದ ಬಂದು ಯೆಹೂದದಲ್ಲಿ ನೆಲೆಸಿದ್ದ ವಿದೇಶಿಯರೂ ಹಬ್ಬವನ್ನು ಆಚರಿಸಿ ಬಹಳವಾಗಿ ಸಂತೋಷಿಸಿದರು. ಅಧ್ಯಾಯವನ್ನು ನೋಡಿ |