Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:27 - ಕನ್ನಡ ಸಮಕಾಲಿಕ ಅನುವಾದ

27 ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರವು [ದೇವರಿಗೆ] ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾಜಕರು ಮತ್ತು ಲೇವಿಯರು ಎದ್ದುನಿಂತು ಜನರನ್ನು ಯೆಹೋವನು ಆಶೀರ್ವದಿಸುವಂತೆ ಕೇಳಿಕೊಂಡರು. ದೇವರು ಪರಲೋಕದ ತನ್ನ ಪವಿತ್ರ ನಿವಾಸಕ್ಕೆ ಬಂದ ಆ ಪ್ರಾರ್ಥನೆಗೆ ಕಿವಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:27
14 ತಿಳಿವುಗಳ ಹೋಲಿಕೆ  

ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ.


ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.


ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.


ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.


“ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ, ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು.


ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ, ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.


ಇದಲ್ಲದೆ ನೀವು ನಿಮ್ಮ ಸೇವಕನ ಮತ್ತು ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು