Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:5 - ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜನರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಬೇಕೆಂಬುದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಆವರೆಗೂ, ಜನರಲ್ಲಿ ಹೆಚ್ಚುಮಂದಿ ಧರ್ಮಶಾಸ್ತ್ರವಿಧಿಯ ಮೇರೆಗೆ, ಪಾಸ್ಕವನ್ನು ಆಚರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಜನರು ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇವಿುಗೆ ಬರಬೇಕು ಎಂಬದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಾಯೇಲ್ಯರೊಳಗೆ ಡಂಗುರಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆವರೆಗೂ ಧರ್ಮಶಾಸ್ತ್ರವಿಧಿಯ ಮೇರೆಗೆ ಪಸ್ಕವನ್ನು ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದನ್ನು ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣದವರೆಗಿನ ಜನರಿಗೆಲ್ಲಾ ಪ್ರಕಟಿಸಿದರು. ಇಸ್ರೇಲಿನ ದೇವರಾದ ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಲು ಎಲ್ಲರಿಗೂ ಆಹ್ವಾನಿಸಿದರು. ಮೋಶೆಯು ಹೇಳಿದ್ದ ನಿಯಮಕ್ಕನುಸಾರವಾಗಿ ಪಸ್ಕಹಬ್ಬವನ್ನು ಎಷ್ಟೋ ಜನರು ಅನೇಕ ವರ್ಷಗಳಿಂದ ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:5
16 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.


ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.


ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು.


ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ,


ಪ್ರವಾದಿಯಾದ ಸಮುಯೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ. ಇಸ್ರಾಯೇಲಿನ ಸಮಸ್ತ ಅರಸರಲ್ಲಿ ಯೋಷೀಯನೂ, ಯಾಜಕರೂ, ಲೇವಿಯರೂ, ಸಿದ್ಧವಾಗಿದ್ದ ಯೆಹೂದ ಹಾಗೂ ಇಸ್ರಾಯೇಲರೆಲ್ಲರೂ, ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.


ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಇಸ್ರಾಯೇಲರಿಗೆ ಆಜ್ಞಾಪಿಸಿದ ತೆರಿಗೆಯನ್ನು ಯೆಹೋವ ದೇವರಿಗೆ ತರಬೇಕೆಂದು ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಮಾಡಿದರು.


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


“ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು.


“ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು.


ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.


ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು