2 ಪೂರ್ವಕಾಲ ವೃತ್ತಾಂತ 30:6 - ಕನ್ನಡ ಸಮಕಾಲಿಕ ಅನುವಾದ6 ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅರಸನ ಮತ್ತು ಅವನ ಪದಾಧಿಕಾರಿಗಳ ಪತ್ರವನ್ನು ತೆಗೆದುಕೊಂಡುಹೋದ ದೂತರು ಇಸ್ರಯೇಲ್ ಹಾಗು ಜುದೇಯ ನಾಡುಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಯೇಲರೇ, ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರಾದ ಸರ್ವೇಶ್ವರನಿಗೆ ಅಭಿಮುಖರಾಗಿರಿ. ಆಗ ಅವರೂ ನಿಮ್ಮಲ್ಲಿ ಅಸ್ಸೀರಿಯಾದ ಅರಸನ ಕೈಗೆ ಸಿಕ್ಕದೆ ತಪ್ಪಿಸಿಕೊಂಡ ಅಳಿದುಳಿದವರಿಗೆ ಅಭಿಮುಖರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅರಸನ ಮತ್ತು ಅವನ ಸರದಾರರ ಪತ್ರಗಳನ್ನು ತೆಗೆದುಕೊಂಡುಹೋದ ದೂತರು ಇಸ್ರಾಯೇಲ್ ಯೆಹೂದದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಪ್ರಕಟಿಸಿದ್ದೇನಂದರೆ - ಇಸ್ರಾಯೇಲ್ಯರೇ, ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನೂ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ತಿರುಗಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅದಕ್ಕಾಗಿ ಸಂದೇಶಕರು ರಾಜನ ಪತ್ರವನ್ನು ಇಡೀ ಇಸ್ರೇಲ್ ಮತ್ತು ಯೆಹೂದ ಪ್ರಾಂತ್ಯದ ಜನರಿಗೆ ಕೊಟ್ಟರು. ಅದರಲ್ಲಿ ಹೀಗೆ ಬರೆದಿದ್ದನು: “ಇಸ್ರೇಲಿನ ಮಕ್ಕಳೇ, ಅಬ್ರಹಾಮನೂ ಇಸಾಕನೂ ಯಾಕೋಬನೂ ಆರಾಧಿಸಿದ ದೇವರಾದ ಯೆಹೋವನ ಕಡೆಗೆ ತಿರುಗಿರಿ. ಆಗ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ಆತನು ತಿರುಗಿಕೊಳ್ಳುವನು. ಅಧ್ಯಾಯವನ್ನು ನೋಡಿ |
ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.