Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:8 - ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮ ಪೂರ್ವಿಕರ ಹಾಗೆ ಮೊಂಡರಾಗಿರಬೇಡಿ. ನೀವು ಪೂರ್ಣಮನಸ್ಸಿನಿಂದ ದೇವರಿಗೆ ವಿಧೇಯರಾಗಿರಿ. ಆತನ ಶಾಶ್ವತವಾದ ಮಹಾಪವಿತ್ರಸ್ಥಳಕ್ಕೆ ಬನ್ನಿರಿ. ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ ಮತ್ತು ಆತನ ಸೇವೆಮಾಡಿರಿ. ಆಗ ನಿಮ್ಮ ಮೇಲಿರುವ ಆತನ ಕೋಪವು ಶಮನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:8
30 ತಿಳಿವುಗಳ ಹೋಲಿಕೆ  

ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.


ಇದಲ್ಲದೆ ಯೆಹೋವ ದೇವರು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಇವರು ಹಟಮಾರಿ ಜನರೇ,


ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.


ಆದ್ದರಿಂದ, “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು ಆವರಿಸಿ ಸಂರಕ್ಷಿಸಿದರು.


ಆದರೆ ಇಸ್ರಾಯೇಲರ ಕುರಿತಾಗಿ, “ನನಗೆ ಅವಿಧೇಯರೂ ಎದುರುಮಾತಾಡುವವರೂ ಆಗಿರುವ ಜನರಿಗೆ, ದಿನವೆಲ್ಲಾ ನಾನು ಕೈಚಾಚಿ ಕರೆದೆನು,” ಎಂದು ಹೇಳುತ್ತಾನೆ.


ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ದೇವರು ನಾಶದ ದೇವದೂತರನ್ನು ಕಳುಹಿಸುತ್ತಾ ತಮ್ಮ ಬೇಸರದಿಂದಲೂ ದುಃಖದಿಂದಲೂ ಇಕ್ಕಟ್ಟುಗಳನ್ನೂ ಅವರ ಮೇಲೆ ಸುರಿಯಮಾಡಿದರು.


ನಾನು ದೇವರ ಪರಿಶುದ್ಧ ಆಲಯಕ್ಕೆ ಬರುವವರೆಗೆ ನನಗೆ ಅರ್ಥವಾಗಲಿಲ್ಲ. ಅನಂತರ ಅವರ ಅಂತ್ಯವನ್ನು ನನಗೆ ಅರ್ಥವಾಯಿತು.


ಈಜಿಪ್ಟಿನಿಂದ ರಾಯಭಾರಿಗಳು ಬರುವರು. ಕೂಷ್ ದೇಶದವರು ತಾವಾಗಿಯೇ ಬಂದು ದೇವರಿಗೆ ಅಧೀನವಾಗುವರು.


ದೇವರೇ, ನಿಮ್ಮ ಮೆರವಣಿಗೆಯು ಪ್ರಕಟವಾಗಿದೆ. ನನ್ನ ಅರಸರಾಗಿರುವ ದೇವರ ಮೆರವಣಿಗೆಯು ಪರಿಶುದ್ಧ ಸ್ಥಳವನ್ನು ಪ್ರವೇಶಿಸುವುದು.


ನಾನು ನಿಮ್ಮ ಶಕ್ತಿಯನ್ನೂ ನಿಮ್ಮ ಮಹಿಮೆಯನ್ನೂ ಪರಿಶುದ್ಧ ಸ್ಥಳದಲ್ಲಿ ಕಂಡಿದ್ದೇನೆ. ಹೌದು, ನಾನು ನಿಮ್ಮನ್ನೇ ದೃಷ್ಟಿಸಿದ್ದೇನೆ.


ಇವರು ತಮ್ಮ ಹೆಂಡತಿಯರನ್ನು ಹೊರಡಿಸಿಬಿಡುವೆವೆಂದು ಪ್ರತಿಜ್ಞೆ ಮಾಡಿ, ತಾವು ಅಪರಾಧಸ್ಥರಾದ್ದರಿಂದ ಅಪರಾಧ ಕಳೆಯುವುದಕ್ಕೆ ಮಂದೆಯಿಂದ ತಂದ ಒಂದು ಟಗರನ್ನು ಅರ್ಪಿಸಿದರು.


ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.


ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.


ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.


ಎಲ್ಲಾ ಪ್ರಧಾನರೂ, ಪರಾಕ್ರಮಶಾಲಿಗಳೂ, ಅರಸನಾದ ದಾವೀದನ ಸಮಸ್ತ ಪುತ್ರರೂ ಅರಸನಾದ ಸೊಲೊಮೋನನಿಗೆ ಅಧೀನರಾದರು.


ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೂ, ಅವರು ನಿಮಗೆ ನೀಡಿದ ಷರತ್ತುಗಳನ್ನೂ, ಅವರ ತೀರ್ಪುಗಳನ್ನೂ ಎಚ್ಚರಿಕೆಯಿಂದ ಕೈಗೊಳ್ಳಬೇಕು.


ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.


ಆದಕಾರಣ ದಯಮಾಡಿ ಸಭೆಯ ಎಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಈ ಕಾರ್ಯದ ನಿಮಿತ್ತ ನಮ್ಮ ದೇವರ ಕಠಿಣ ಕೋಪವು ನಮ್ಮನ್ನು ಬಿಟ್ಟು ಹೋಗುವವರೆಗೆ, ನಮ್ಮ ಪಟ್ಟಣಗಳಲ್ಲಿ ಯಹೂದ್ಯರಲ್ಲದ ಸ್ತ್ರೀಯರನ್ನು ತೆಗೆದುಕೊಂಡವರು, ನೇಮಿಸಿದ ಕಾಲದಲ್ಲಿ ಬಂದು, ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ, ಅದರ ನ್ಯಾಯಾಧಿಪತಿಗಳೂ ಇರಲಿ,” ಎಂದರು.


ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.


ದೇವರು ತಮ್ಮ ಬಾಯಿಂದ, ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ ಆಲಯವನ್ನು ಕಟ್ಟುವುದಕ್ಕೆ, ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ಆರಿಸಿಕೊಳ್ಳಲಿಲ್ಲ. ನನ್ನ ಜನರಾದ ಇಸ್ರಾಯೇಲರ ಮೇಲೆ ಆಳುವವನಾಗಿರಲು ನಾನು ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು