Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:9 - ಕನ್ನಡ ಸಮಕಾಲಿಕ ಅನುವಾದ

9 ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಸರ್ವೇಶ್ವರನಿಗೆ ಅಭಿಮುಖರಾದರೆ, ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ಮರಳಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಸರ್ವೇಶ್ವರ ದಯಾವಂತರು, ಕನಿಕರವುಳ್ಳವರು. ತಮಗೆ ಅಭಿಮುಖರಾಗುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಯೆಹೋವನ ಕಡೆಗೆ ತಿರುಗಿಕೊಳ್ಳುವದಾದರೆ ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ ತಿರಿಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳವನಾಗಿರುತ್ತಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವದಿಲ್ಲ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ಯೆಹೋವನಿಗೆ ವಿಧೇಯರಾದರೆ ನಿಮ್ಮ ಮಕ್ಕಳೂ ಬಂಧುಗಳೂ ತಮ್ಮನ್ನು ಸೆರೆಹಿಡಿದವರಿಂದ ಕರುಣೆಯನ್ನು ಹೊಂದಿ ಮತ್ತೆ ಈ ದೇಶಕ್ಕೆ ಬರುವರು. ದೇವರಾದ ಯೆಹೋವನು ದಯೆಯೂ ಕರುಣೆಯೂ ಉಳ್ಳವನಾಗಿದ್ದಾನೆ. ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮನ್ನು ತಳ್ಳಿಬಿಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:9
23 ತಿಳಿವುಗಳ ಹೋಲಿಕೆ  

ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನೂ, ಅವರ ಸಮಸ್ತ ದ್ರೋಹಗಳನ್ನೂ ಕ್ಷಮಿಸಿರಿ; ಅವರನ್ನು ಸೆರೆಯಾಗಿ ಒಯ್ಯುವವರು ಅವರನ್ನು ಕರುಣಿಸುವಂತೆ ನೀವು ಸಹ ಅವರನ್ನು ಕರುಣಿಸಿರಿ.


ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.


ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.


ಮೂಡಣ ಗಾಳಿಯಿಂದ ಆದ ಹಾಗೆ, ಅವರನ್ನು ಶತ್ರುವಿನ ಮುಂದೆ ಚದರಿಸುವೆನು. ಅವರ ಆಪತ್ತಿನ ದಿವಸದಲ್ಲಿ ಅವರಿಗೆ ಮುಖವನ್ನಲ್ಲ ಬೆನ್ನನ್ನು ತೋರಿಸುವೆನು.”


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು.


ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.


ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.


ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ.


ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು