Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:1 - ಕನ್ನಡ ಸಮಕಾಲಿಕ ಅನುವಾದ

1 ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:1
18 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.


ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಸಮಸ್ತ ಜನರು ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು.


ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.


ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸರ ಹಾಗಿರಲಿಲ್ಲ.


ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು.


ಅವರ ದೇವರುಗಳಿಗೆ ನೀವು ಅಡ್ಡಬೀಳಲೂಬಾರದು, ಅವುಗಳನ್ನು ಆರಾಧಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ, ಅವರನ್ನು ನಿರ್ಮೂಲ ಮಾಡಿಬಿಟ್ಟು, ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದುಹಾಕಬೇಕು.


ಸೂರ್ಯೋದಯವಾಗುವ ಮೊದಲು ದೂತರು ಲೋಟನನ್ನು ತ್ವರೆಪಡಿಸಿ, “ಈ ಪಟ್ಟಣಕ್ಕೆ ಉಂಟಾಗುವ ದಂಡನೆಯಿಂದ ನೀನು ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಪುತ್ರಿಯರನ್ನೂ ಕರೆದುಕೊಂಡು ನಡೆ,” ಎಂದರು.


ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು,” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ಆಸನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡಿದನು.


ಅವರು ತಮ್ಮ ಕೈಕೆಲಸವಾದ ಬಲಿಪೀಠಗಳನ್ನು ದೃಷ್ಟಿಸುವರು. ಬೆರಳುಗಳು ಮಾಡಿದ ಧೂಪಪೀಠಗಳನ್ನು, ಅಶೇರ ಸ್ತಂಭಗಳನ್ನು ಗೌರವಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು