2 ಪೂರ್ವಕಾಲ ವೃತ್ತಾಂತ 31:18 - ಕನ್ನಡ ಸಮಕಾಲಿಕ ಅನುವಾದ18 ಅವರ ಹೆಂಡತಿಯರಿಗೂ ಚಿಕ್ಕವರಿಗೂ ಪುತ್ರಪುತ್ರಿಯರಿಗೂ ಪಾಲು ಕೊಡುವುದಕ್ಕೂ ಇದ್ದರು. ಏಕೆಂದರೆ ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನೇ ತಾವು ಪರಿಶುದ್ಧಗೊಳಿಸುವಲ್ಲಿ ನಂಬಿಗಸ್ತರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರವರ ಹೆಂಡತಿಯರು, ಗಂಡು-ಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನೇ ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಲೇವಿಯರು, ಅವರವರ ಹೆಂಡತಿಯರು, ಗಂಡು ಹೆಣ್ಣು ಮಕ್ಕಳು ಅಂತು ತಮ್ಮ ಉದ್ಯೋಗದ ನಿವಿುತ್ತ ತಮ್ಮನ್ನು ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಲೇವಿಯರ ಹೆಂಡತಿಯರಿಗೂ ಮಕ್ಕಳಿಗೂ ಎಲ್ಲರಿಗೂ ಅದರಲ್ಲಿ ಪಾಲು ದೊರೆಯಿತು. ಯಾರ್ಯಾರ ಹೆಸರುಗಳು ಲೇವಿಯರ ಕುಟುಂಬದ ಪಟ್ಟಿಯಲ್ಲಿ ಬರೆಯಲ್ಪಟ್ಟಿತ್ತೊ ಅವರೆಲ್ಲರಿಗೆ ಪಾಲು ದೊರೆಯಿತು. ಯಾಕೆಂದರೆ ಲೇವಿಯರು ತಮ್ಮನ್ನು ದೇವಾಲಯದ ಸೇವೆಗೆ ಯಾವಾಗಲೂ ಸಿದ್ಧಪಡಿಸಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿ |