2 ಪೂರ್ವಕಾಲ ವೃತ್ತಾಂತ 31:19 - ಕನ್ನಡ ಸಮಕಾಲಿಕ ಅನುವಾದ19 ಯಾಜಕರಲ್ಲಿ ಸಮಸ್ತ ಗಂಡಸರಿಗೂ, ಲೇವಿಯರಲ್ಲಿ ಲಿಖಿತರಾದ ಸಮಸ್ತರಿಗೂ ಪಾಲನ್ನು ಕೊಡುವುದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ವಂಶಾವಳಿಯ ದಾಖಲೆಯ ಪ್ರಕಾರ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದಲ್ಲದೆ, ಆರೋನನ ಸಂತಾನದವರಾದ ಯಾಜಕರು ಆಯಾ ಪಟ್ಟಣಗಳಿಗೆ ಸೇರಿದ ಹುಲ್ಲುಗಾವಲುಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ, ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರೆಸರಾಗಿ ನೇಮಿಸಲ್ಪಟ್ಟರೂ ಪುರುಷರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದಲ್ಲದೆ ಆಯಾ ಪಟ್ಟಣಗಳಿಗೆ ಸೇರಿದ ಗೋಮಾಳಗಳಲ್ಲಿದ್ದ ಆರೋನನ ಸಂತಾನದ ಯಾಜಕರಿಗೆ ಪಾಲುಕೊಡುತ್ತಿದ್ದರು. ಯಾಜಕ ಸಂತಾನದ ಎಲ್ಲ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರಿಸಲಾದ ಪುರುಷರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದಲ್ಲದೆ ಆರೋನನ ಸಂತಾನದವರಾದ ಯಾಜಕರ ಆಯಾ ಪಟ್ಟಣಗಳಿಗೆ ಸೇರಿದ ಗೋಮಾಳಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವದಕ್ಕೆ ಹೆಸರು ಹೆಸರಾಗಿ ನೇವಿುಸಲ್ಪಟ್ಟ ಪುರುಷರಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆರೋನನ ಸಂತತಿಯ ಕೆಲವು ಯಾಜಕರಿಗೆ ಲೇವಿಯರು ವಾಸಿಸುತ್ತಿದ್ದ ಪಟ್ಟಣಗಳ ಹತ್ತಿರ ಹೊಲಗಳಿದ್ದವು. ಆರೋನನ ಸಂತತಿಯವರಲ್ಲಿ ಕೆಲವರು ಲೇವಿಯರ ಪಟ್ಟಣಗಳಲ್ಲಿಯೂ ವಾಸಮಾಡುತ್ತಿದ್ದರು. ಈ ಆರೋನನ ಸಂತತಿಯವರಿಗೆ ಪಾಲು ಕೊಡಲು ಕೆಲವರನ್ನು ನೇಮಿಸಲಾಯಿತು. ಗಂಡಸರಿಗೆ ಮತ್ತು ವಂಶಾವಳಿಯಲ್ಲಿ ಹೆಸರನ್ನು ಹೊಂದಿದ್ದ ಎಲ್ಲಾ ಲೇವಿಯರಿಗೆ ಸಂಗ್ರಹಿಸಲ್ಪಟ್ಟಿದ್ದರಲ್ಲಿ ಅವರವರ ಪಾಲು ದೊರೆಯಿತು. ಅಧ್ಯಾಯವನ್ನು ನೋಡಿ |
ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.