2 ಪೂರ್ವಕಾಲ ವೃತ್ತಾಂತ 31:2 - ಕನ್ನಡ ಸಮಕಾಲಿಕ ಅನುವಾದ2 ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ ಸರ್ವಾಂಗಹೋಮ ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸುವದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವದಕ್ಕೂ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು. ಅಧ್ಯಾಯವನ್ನು ನೋಡಿ |
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.
ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.