2 ಪೂರ್ವಕಾಲ ವೃತ್ತಾಂತ 31:21 - ಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ದೇವರ ಆಲಯದ ಸೇವೆಯಲ್ಲಿಯೂ, ಮೋಶೆಯ ನಿಯಮದಲ್ಲಿಯೂ, ದೇವರ ಆಜ್ಞೆಗಳಲ್ಲಿಯೂ ಅವನು ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳನ್ನು ತನ್ನ ಪೂರ್ಣಹೃದಯದಿಂದ ಮಾಡಿ, ಅವನು ಅಭಿವೃದ್ಧಿ ಹೊಂದಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವಾಲಯದ ಸೇವಾಸಂಬಂಧದಲ್ಲೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲೂ ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದ ಮಾಡಿ ಮುಗಿಸಿ, ತನ್ನ ದೇವರ ಒಲುಮೆಯನ್ನು ಗಳಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನು ತನ್ನ ದೇವರ ಒಲುಮೆಯನ್ನು ಪಡಕೊಳ್ಳುವದಕ್ಕೋಸ್ಕರ ದೇವಾಲಯದ ಸೇವಾಸಂಬಂಧದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದ ಮಾಡಿ ಕೊನೆಗಾಣಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹಿಜ್ಕೀಯನು ತಾನು ಪ್ರಾರಂಭಿಸಿದ ಪ್ರತಿಯೊಂದು ಕಾರ್ಯಗಳನ್ನೂ ದೇವಾಲಯದ ಕಾರ್ಯಗಳನ್ನೂ ದೇವರ ಕಟ್ಟಳೆಗಳನ್ನೂ ಅನುಸರಿಸುವದನ್ನು ಪೂರ್ಣಹೃದಯದಿಂದ ಮಾಡಿ ಯಶಸ್ವಿಯಾದನು. ಅಧ್ಯಾಯವನ್ನು ನೋಡಿ |
ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು.