2 ಪೂರ್ವಕಾಲ ವೃತ್ತಾಂತ 31:3 - ಕನ್ನಡ ಸಮಕಾಲಿಕ ಅನುವಾದ3 ಅವನು ಯೆಹೋವ ದೇವರ ನಿಯಮದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಆಸ್ತಿಯಿಂದಲೇ ಅವನ ಭಾಗವನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ, ಅರಸನು ಯೆಹೋವನ ಧರ್ಮಶಾಸ್ತ್ರದ ವಿಧಿಗನುಸಾರವಾಗಿ ಪ್ರಾತಃಕಾಲ, ಸಾಯಂಕಾಲ, ಸಬ್ಬತ್ ದಿನ, ಅಮಾವಾಸ್ಯೆ ಹಾಗು ಹಬ್ಬಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗಾಗಿ ಆಗಬೇಕಾದ ಎಲ್ಲವನ್ನು ತನ್ನ ಸ್ವಂತ ಆಸ್ತಿಯಿಂದಲೇ ಸಲ್ಲಿಸಬೇಕು ಎಂದು ಸೂಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದಲ್ಲದೆ, ಅವನು ಸರ್ವೇಶ್ವರನ ಧರ್ಮಶಾಸ್ತ್ರ ವಿಧಿಗನುಸಾರ ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗು ಜಾತ್ರೆಗಳಲ್ಲಿ ಸಮರ್ಪಣೆ ಆಗತಕ್ಕ ದಹನ ಬಲಿಗಳಿಗೆ ಬೇಕಾದುದನ್ನೆಲ್ಲಾ ತನ್ನ ಆಸ್ತಿಯಿಂದಲೇ ಸಲ್ಲಿಸಲಾಗುವುದೆಂದು ಸೂಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ಅವನು ಯೆಹೋವನ ಧರ್ಮಶಾಸ್ತ್ರವಿಧಿಗನುಸಾರವಾಗಿ ಪ್ರಾತಃಕಾಲ ಸಾಯಂಕಾಲ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗೋಸ್ಕರ ಆಗಬೇಕಾದದ್ದೆಲ್ಲಾ ತನ್ನ ಆಸ್ತಿಯಿಂದ ಸಲ್ಲಿಸಬೇಕೆಂತಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಹಿಜ್ಕೀಯನು ತನ್ನ ಪಶುಗಳಲ್ಲಿ ಕೆಲವನ್ನು ಸರ್ವಾಂಗಹೋಮಕ್ಕಾಗಿ ಕೊಟ್ಟನು. ಇವುಗಳನ್ನು ಪ್ರತಿನಿತ್ಯದ ಬೆಳಿಗ್ಗೆ ಮತ್ತು ಸಂಜೆ ಸಮರ್ಪಿಸುವ ಸರ್ವಾಂಗಹೋಮಗಳಿಗಾಗಿ ಉಪಯೋಗಿಸಿಕೊಳ್ಳಲಾಯಿತು; ಅಲ್ಲದೆ ಸಬ್ಬತ್ ದಿನದಂದೂ ಅಮವಾಸ್ಯೆ ದಿನದಂದೂ ಅವುಗಳನ್ನು ಅರ್ಪಿಸಿದರು. ಇವೆಲ್ಲಾ ದೇವರ ಕಟ್ಟಳೆಗಳಿಗನುಸಾರವಾಗಿದ್ದವು. ಅಧ್ಯಾಯವನ್ನು ನೋಡಿ |