Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:1 - ಕನ್ನಡ ಸಮಕಾಲಿಕ ಅನುವಾದ

1 ಹಿಜ್ಕೀಯನು ಇಷ್ಟು ನಂಬಿಗಸ್ತಿಕೆಯಿಂದ ಎಲ್ಲವನ್ನೂ ಮಾಡಿದ ತರುವಾಯ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿಸಿ, ಅವುಗಳನ್ನು ತನಗಾಗಿ ಜಯಿಸಬೇಕೆಂದು ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈ ಧಾರ್ಮಿಕ ಸುಧಾರಣೆಗಳಾದ ನಂತರ ಅಸ್ಸೀರಿಯಾದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಜುದೇಯಕ್ಕೆ ನುಗ್ಗಿದನು. ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಈ ಭಕ್ತಿಕಾರ್ಯಗಳಾದನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹೀಗೆ ಒಳ್ಳೆಯ ಕಾರ್ಯಗಳನ್ನು ಹಿಜ್ಕೀಯನು ಮಾಡುತ್ತಿರುವಾಗ ಅಶ್ಶೂರದ ರಾಜನಾದ ಸನ್ಹೇರೀಬನು ಯೆಹೂದದ ಮೇಲೆ ಯುದ್ಧಮಾಡಲು ಬಂದನು. ಸರಿಯಾದ ಸಮಯದಲ್ಲಿ ಪಟ್ಟಣದ ಮೇಲೆ ಧಾಳಿಮಾಡಿ ಸೋಲಿಸುವದಕ್ಕೋಸ್ಕರ ಸನ್ಹೇರೀಬನೂ ಅವನ ಸೈನಿಕರೂ ಪಟ್ಟಣಗಳ ಕೋಟೆಗಳ ಹೊರಗಡೆ ಪಾಳೆಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:1
16 ತಿಳಿವುಗಳ ಹೋಲಿಕೆ  

ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.”


“ಅವರು ಮಾನಸಾಂತರಪಡಲು ನಿರಾಕರಿಸಿದ್ದರಿಂದ, ಪುನಃ ಈಜಿಪ್ಟಿಗೆ ಹಿಂದಿರುಗುವರು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವರು.


ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ಅಸ್ಸೀರಿಯದ ಅರಸನು ಇಸ್ರಾಯೇಲರನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


ಸನ್ಹೇರೀಬನು ಬಂದದ್ದನ್ನೂ, ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ನಿಶ್ಚಯಿಸಿದ್ದನ್ನೂ ಹಿಜ್ಕೀಯನು ಕಂಡಾಗ,


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ಯೋಷೀಯನು ಮಹಾ ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ಅರಸ ನೆಕೋ ಎಂಬವನು ಯುದ್ಧಮಾಡುವುದಕ್ಕಾಗಿ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು. ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದನು.


ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು. ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.


ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು