Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:13 - ಕನ್ನಡ ಸಮಕಾಲಿಕ ಅನುವಾದ

13 “ನಾನೂ, ನನ್ನ ಪಿತೃಗಳು ದೇಶಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವಿತ್ತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನೂ ನನ್ನ ತಂದೆತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ನೀವು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಶಕ್ತಿಯಿತ್ತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನೂ ನನ್ನ ತಂದೆತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವದಕ್ಕೆ ಶಕ್ತಿಯಿತ್ತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಮ್ಮ ಪೂರ್ವಿಕರೂ ನಾನೂ ಬೇರೆ ದೇಶಗಳಿಗೆಲ್ಲಾ ಏನು ಮಾಡಿದ್ದೇವೆಂದು ನಿಮಗೆ ತಿಳಿದದೆ. ಆ ದೇಶದ ದೇವರುಗಳು ಅವರನ್ನು ಕಾಪಾಡಲಿಲ್ಲ. ಆ ದೇವರುಗಳು ಅವರನ್ನು ನಾಶಮಾಡದಂತೆ ನನ್ನನ್ನು ತಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:13
20 ತಿಳಿವುಗಳ ಹೋಲಿಕೆ  

ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.


ಪೌಲನೆಂಬ ಈ ಮನುಷ್ಯನು ಎಫೆಸದಲ್ಲಿಯೂ ಇಡೀ ಏಷ್ಯಾ ಪ್ರಾಂತದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಮನವೊಲಿಸಿ, ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲ ಎಂದು ಹೇಳಿ, ಅವರನ್ನು ಮಾರ್ಪಡಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ಕೇಳಿದ್ದೀರಿ ಹಾಗೂ ಕಂಡಿದ್ದೀರಿ.


ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ಜನರ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಕೂಡಿಸುವಂತೆ, ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬಾಯಿತೆರೆದು ಕೀಚುಗುಟ್ಟಲು ಯಾರೂ ಇರಲಿಲ್ಲ.’ ”


ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವರುಗಳಲ್ಲಿ ನನ್ನ ಕೈಯಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವುದು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು