Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:16 - ಕನ್ನಡ ಸಮಕಾಲಿಕ ಅನುವಾದ

16 ಹೀಗೆ ಅವನ ಸೇವಕರು ಇನ್ನೂ ದೇವರಾದ ಯೆಹೋವ ದೇವರಿಗೆ ವಿರೋಧವಾಗಿಯೂ, ಅವರ ಸೇವಕನಾದ ಹಿಜ್ಕೀಯನಿಗೆ ವಿರೋಧವಾಗಿಯೂ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೇವರಾದ ಸರ್ವೇಶ್ವರನಿಗೂ ಅವರ ಸೇವಕನಾದ ಹಿಜ್ಕೀಯನಿಗೂ ವಿರೋಧವಾದ ಈ ಮೊದಲಾದ ಮಾತುಗಳನ್ನು ಸನ್ಹೇರೀಬನು ತನ್ನ ಸೇವಕರ ಮುಖಾಂತರ ಹೇಳಿಕಳುಹಿಸಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರೋಧವಾದ ಈ ಮೊದಲಾದ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದ್ದಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಶ್ಶೂರದ ಅರಸನ ಸೇವಕರು ದೇವರಾದ ಯೆಹೋವನ ವಿರುದ್ಧವಾಗಿಯೂ ದೇವರ ಸೇವಕನಾದ ಹಿಜ್ಕೀಯನ ವಿರುದ್ಧವಾಗಿಯೂ ಕೀಳಾಗಿ ಮಾತಾಡಿದರು; ಇಸ್ರೇಲಿನ ದೇವರಾದ ಯೆಹೋವನನ್ನು ಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:16
5 ತಿಳಿವುಗಳ ಹೋಲಿಕೆ  

ಆದರೆ ಅವರು ನನ್ನನ್ನು ಕಳುಹಿಸಿದ ತಂದೆಯನ್ನು ತಿಳಿಯದಿರುವುದರಿಂದಲೇ ನನ್ನ ಹೆಸರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.


ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ. ಭೂಲೋಕದಲ್ಲೆಲ್ಲಾ ಅವರ ಮಾತು ಮುಂದುವರೆದಿದೆ.


ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.


ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ನಿಂದಿಸುವುದಕ್ಕೂ, ಅವರಿಗೆ ವಿರೋಧವಾಗಿ ಮಾತನಾಡುವುದಕ್ಕೂ ಪತ್ರಗಳನ್ನು ಬರೆದನು. ಅದರಲ್ಲಿ, “ಇತರ ದೇಶಗಳ ಜನಾಂಗಗಳ ದೇವರುಗಳು, ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ, ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸನು,” ಎಂದು ಬರೆದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು