Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:17 - ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ನಿಂದಿಸುವುದಕ್ಕೂ, ಅವರಿಗೆ ವಿರೋಧವಾಗಿ ಮಾತನಾಡುವುದಕ್ಕೂ ಪತ್ರಗಳನ್ನು ಬರೆದನು. ಅದರಲ್ಲಿ, “ಇತರ ದೇಶಗಳ ಜನಾಂಗಗಳ ದೇವರುಗಳು, ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ, ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸನು,” ಎಂದು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಷ್ಟುಮಾತ್ರವಲ್ಲ, ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ನಿಂದಿಸಿ ದೂಷಿಸುವುದಕ್ಕಾಗಿ ‘ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆಹೋದಂತೆ ಹಿಜ್ಕೀಯನ ದೇವರೂ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸಲಾರನು’ ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವದಕ್ಕಾಗಿ - ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರೂ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸಲಾರನು ಎಂಬದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಶ್ಶೂರದ ಅರಸನು ಇಸ್ರೇಲಿನ ದೇವರಾದ ಯೆಹೋವನನ್ನು ಅವಮಾನ ಮಾಡಿ ಬರೆದ ಪತ್ರ ಹೀಗಿತ್ತು: “ಇತರ ದೇಶಗಳ ದೇವರುಗಳು ತಮ್ಮ ಜನರನ್ನು ನಾಶಮಾಡದಂತೆ ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ. ಅದೇ ರೀತಿಯಲ್ಲಿ ಹಿಜ್ಕೀಯನ ದೇವರು ತನ್ನ ಜನರನ್ನು ನಾಶಮಾಡದ ಹಾಗೆ ನನ್ನನ್ನು ತಡೆಯಲು ಸಾಧ್ಯವಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:17
16 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.


ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?


ಆ ಮೃಗವು ತನ್ನ ಬಾಯಿತೆರೆದು, ದೇವರಿಗೆ ವಿರುದ್ಧವಾಗಿ ದೂಷಿಸಿ, ಅವರ ನಾಮವನ್ನೂ ಅವರ ನಿವಾಸವನ್ನೂ ಮತ್ತು ಪರಲೋಕ ನಿವಾಸಿಗಳನ್ನೂ ದೂಷಿಸಿತು.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಐದನೆಯ ಸಾರಿ ಸನ್ಬಲ್ಲಟನು ತನ್ನ ದೂತನ ಕೈಯಲ್ಲಿ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು.


ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ, ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ, ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.’


ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?


ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.


ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,


ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವರುಗಳಲ್ಲಿ ನನ್ನ ಕೈಯಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವುದು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?


ಹೀಗೆ ಅವನ ಸೇವಕರು ಇನ್ನೂ ದೇವರಾದ ಯೆಹೋವ ದೇವರಿಗೆ ವಿರೋಧವಾಗಿಯೂ, ಅವರ ಸೇವಕನಾದ ಹಿಜ್ಕೀಯನಿಗೆ ವಿರೋಧವಾಗಿಯೂ ಮಾತನಾಡಿದರು.


ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.


ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.


ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು