2 ಪೂರ್ವಕಾಲ ವೃತ್ತಾಂತ 32:30 - ಕನ್ನಡ ಸಮಕಾಲಿಕ ಅನುವಾದ30 ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು, ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪೂರ್ವದಿಕ್ಕಿನ ಕಣಿವೆಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲ ಕಾರ್ಯಗಳಲ್ಲೂ ಯಶಸ್ವಿ ಆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಸಾರ್ಥಕನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಹಿಜ್ಕೀಯನು ಗೀಹೋನ್ ಬುಗ್ಗೆಯನ್ನು ತಡೆದು ಆ ನೀರು ಪಶ್ಚಿಮದ ಕಡೆಯಲ್ಲಿದ್ದ ದಾವೀದ ನಗರಕ್ಕೆ ನೇರವಾಗಿ ಇಳಿದು ಬರುವಂತೆ ಮಾಡಿದನು. ಅವನು ಕೈಹಾಕಿದ ಕಾರ್ಯಗಳೆಲ್ಲವೂ ಸಫಲವಾದವು. ಅಧ್ಯಾಯವನ್ನು ನೋಡಿ |