Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:10 - ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಮನಸ್ಸೆಯೊಂದಿಗೂ, ಅವನ ಜನರೊಂದಿಗೂ ಮಾತನಾಡಿದರು. ಆದರೆ ಅವರು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರಸ್ವಾಮಿ ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಮನಸ್ಸೆಯ ಮತ್ತು ಅವನ ಜನರ ಸಂಗಡ ಮಾತಾಡಿದರೂ ಅವರು ಆತನ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:10
11 ತಿಳಿವುಗಳ ಹೋಲಿಕೆ  

ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.


ಮನಸ್ಸೆಯ ಇತರ ಕ್ರಿಯೆಗಳೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ, ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನೆಂದರೆ,


ನಾನು ಕರೆದಾಗ ನೀವು ನನ್ನನ್ನು ತಿರಸ್ಕರಿಸಿದ್ದೀರಿ ನಾನು ನನ್ನ ಕೈಚಾಚಿದಾಗ ಯಾರೂ ಮನುಷ್ಯನೂ ಗಮನಿಸಲಿಲ್ಲ.


ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು