Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:18 - ಕನ್ನಡ ಸಮಕಾಲಿಕ ಅನುವಾದ

18 ಮನಸ್ಸೆಯ ಇತರ ಕ್ರಿಯೆಗಳೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ, ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮನಸ್ಸೆಯ ಉಳಿದ ಚರಿತ್ರೆಯೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್ ರಾಜರ ವೃತ್ತಾಂತಗಳಲ್ಲಿ ಬರೆಯಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮನಸ್ಸೆಯ ಉಳಿದ ಚರಿತ್ರೆ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆ, ಹಾಗು ದರ್ಶಿಗಳು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳು, ಇವು ಇಸ್ರಯೇಲ್ ರಾಜರ ಇತಿಹಾಸದಲ್ಲಿ ದಾಖಲಾಗಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮನಸ್ಸೆಯ ಉಳಿದ ಚರಿತ್ರೆಯೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಿಗಳು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್‍ರಾಜರ ವೃತ್ತಾಂತದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮನಸ್ಸೆ ಮಾಡಿದ ಇತರ ಕಾರ್ಯಗಳು ಮತ್ತು ಅವನು ಯೆಹೋವನಿಗೆ ಮಾಡಿದ ಪ್ರಾರ್ಥನೆ, ದೇವದರ್ಶಿಗಳು ಅವನಿಗೆ ಇಸ್ರೇಲರ ದೇವರಾದ ಯೆಹೋವನ ಸಂದೇಶವನ್ನು ಕೊಟ್ಟ ವಿಷಯವೆಲ್ಲಾ ಇಸ್ರೇಲ್ ರಾಜರ ಚರಿತ್ರೆ ಎಂಬ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:18
15 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.


ಅನಂತರ ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ: “ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿ ದುಡಿದು ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.


ಅವರು ನೋಡುವವರಿಗೆ, “ನೋಡಬೇಡಿರಿ,” ಎಂದು ಪ್ರವಾದಿಗಳಿಗೆ, “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ, ನಮಗೆ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ. ನಯವಾದವುಗಳನ್ನೇ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಯೆಹೋಷಾಫಾಟನ ಇತರ ಕ್ರಿಯೆಗಳು, ಆರಂಭದಿಂದ ಅಂತ್ಯದವರೆಗೆ, ಇಸ್ರಾಯೇಲರ ಅರಸುಗಳ ಗ್ರಂಥದಲ್ಲಿ, ಅಂದರೆ, ಹನಾನೀಯ ಮಗನಾದ ಯೇಹುವಿನ ಗ್ರಂಥದಲ್ಲಿ ಬರೆದಿರುತ್ತವೆ.


ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”


ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.


ಯೆಹೋವ ದೇವರು ಮನಸ್ಸೆಯೊಂದಿಗೂ, ಅವನ ಜನರೊಂದಿಗೂ ಮಾತನಾಡಿದರು. ಆದರೆ ಅವರು ಲಕ್ಷಿಸಲಿಲ್ಲ.


ಹಿಜ್ಕೀಯನ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗ ಪ್ರವಾದಿಯಾದ ಯೆಶಾಯನ ದರ್ಶನದ ಪುಸ್ತಕದಲ್ಲಿ ಮತ್ತು ಯೆಹೂದ ಇಸ್ರಾಯೇಲ್ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.


ನಾದಾಬನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ, ಅವನು ಯುದ್ಧ ಮಾಡಿದ್ದೂ, ಆಳಿದ್ದೂ, ಇವು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು.


ಸೊಲೊಮೋನನ ಉಳಿದ ಕ್ರಿಯೆಗಳನ್ನು, ಅವನು ಮಾಡಿದ ಸಾಧನೆಗಳನ್ನು ಮತ್ತು ಅವನ ಜ್ಞಾನವನ್ನು ಕುರಿತು ಸೊಲೊಮೋನನ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತದೆ.


ಇವನ ಸಹೋದರರಾಗಿರುವ ಯೆಹೋಷಾಫಾಟನ ಪುತ್ರರಾದ ಅಜರ್ಯನೂ, ಯೆಹೀಯೇಲನೂ, ಜೆಕರ್ಯನೂ, ಅಜರ್ಯನೂ, ಮೀಕಾಯೇಲನೂ, ಶೆಫಟ್ಯನೂ ಇದ್ದರು. ಇವರೆಲ್ಲರು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಪುತ್ರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು