Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:4 - ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಯೆರೂಸಲೇಮಿನಲ್ಲಿ, “ನನ್ನ ಹೆಸರು ಯುಗಯುಗಕ್ಕೂ ಇರುವುದು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಹಳ ಬಲಿಪೀಠಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಜೆರುಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಯೆರೂಸಲೇವಿುನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವದಕ್ಕಾಗಿ ಆರಿಸಿಕೊಂಡ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವಾಲಯದೊಳಗೆ ಮನಸ್ಸೆಯು ವಿಗ್ರಹಗಳಿಗೆ ವೇದಿಕೆಯನ್ನು ಕಟ್ಟಿಸಿದನು. ಯೆಹೋವನು ದೇವಾಲಯದ ವಿಷಯವಾಗಿ, “ನನ್ನ ಹೆಸರು ಜೆರುಸಲೇಮಿನಲ್ಲಿ ನಿರಂತರಕ್ಕೂ ಸ್ಥಾಪಿತವಾಗುವದು” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:4
17 ತಿಳಿವುಗಳ ಹೋಲಿಕೆ  

ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


“ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.


ಅವನು ಅನ್ಯದೇವರುಗಳನ್ನೂ, ಯೆಹೋವ ದೇವರ ಆಲಯದಲ್ಲಿರುವ ವಿಗ್ರಹವನ್ನೂ ಯೆಹೋವ ದೇವರ ಆಲಯದ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ, ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.


ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.


ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ಅವನೇ ನನ್ನ ಹೆಸರಿಗಾಗಿ ದೇವಾಲಯನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.


ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.


ಮನಸ್ಸೆಯು ತಾನು ಮಾಡಿದ ವಿಗ್ರಹವನ್ನು ದೇವರ ಆಲಯದಲ್ಲಿ ಇಟ್ಟನು. ಆ ಆಲಯದ ಬಗ್ಗೆ ದೇವರು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಹೇಳಿದ್ದೇನೆಂದರೆ, “ನಾನು ಈ ಆಲಯದಲ್ಲಿ ಮತ್ತು ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಶಾಶ್ವತವಾಗಿ ಸ್ಥಾಪಿಸುತ್ತೇನೆ.


ಕೆತ್ತಿದ ಕಲ್ಲುಗಳನ್ನೂ, ತೊಲೆಗಳಿಗೋಸ್ಕರ ಮರಗಳನ್ನೂ, ಯೆಹೂದದ ಅರಸರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಹಲಿಗೆಗಳನ್ನು ಕೊಂಡುಕೊಳ್ಳಲೂ, ಬಡಗಿಯರಿಗೂ, ಕಲ್ಲುಕೆಲಸದವರಿಗೂ ಆ ಹಣವನ್ನು ಕೊಟ್ಟರು.


ಯಾಜಕನಾದ ಊರೀಯನು ಅದರ ಪ್ರಕಾರ ಒಂದು ಬಲಿಪೀಠವನ್ನು ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬರುವ ಮೊದಲೇ ಕಟ್ಟಿ ಮುಗಿಸಿದನು.


ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.


ದೇವರು ತಮ್ಮ ಬಾಯಿಂದ, ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ ಆಲಯವನ್ನು ಕಟ್ಟುವುದಕ್ಕೆ, ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ಆರಿಸಿಕೊಳ್ಳಲಿಲ್ಲ. ನನ್ನ ಜನರಾದ ಇಸ್ರಾಯೇಲರ ಮೇಲೆ ಆಳುವವನಾಗಿರಲು ನಾನು ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು